ನವದೆಹಲಿ: ಕೊರೊನಾ ಮಹಾಮಾರಿ ಬಿಕ್ಕಟ್ಟಿನಿಂದಾಗಿ ದೇಶಾದ್ಯಂತ ಜಿಎಸ್ಟಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬಿದ್ದಿದೆ. ಹೀಗಾಗಿ ರಾಜ್ಯಗಳಿಗೆ ಹೆಚ್ಚಿನ ಜಿಎಸ್ಟಿ ಪರಿಹಾರ ನೀಡಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ತಿಳಿಸಿದ್ದಾರೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ 41ನೇ ಜಿಎಸ್ಟಿ ಕೌನ್ಸಿಲ್ ವರ್ಚುಯಲ್ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.
ಕೇಂದ್ರ ಸರ್ಕಾರದ ಪ್ರಕಾರ ಈ ವರ್ಷ ಜಿಎಸ್ಟಿ ಸಂಗ್ರಹದಲ್ಲಿ 2.35 ಲಕ್ಷ ಕೋಟಿ ಕೊರತೆ ಆಗಲಿದೆ. ಈ ಸಭೆಯಲ್ಲಿ ಎಲ್ಲಾ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಜಿಎಸ್ಟಿ ಸಭೆಯಲ್ಲಿ ಆದಾಯ ಕೊರತೆ ನೀಗಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಯಿತು.