ಧಾರವಾಡ
GST | ಅಗತ್ಯ ವಸ್ತುಗಳಿಗೆ ಜಿ ಎಸ್ ಟಿ – ಕಾಂಗ್ರೆಸ್ ಪ್ರತಿಭಟನೆ
ಧಾರವಾಡ : ದಿನಬಳಕೆಯ ವಸ್ತುಗಳ ಮೇಲೆ ಜಿ ಎಸ್ ಟಿ ಹೇರಿಕೆ ಕೈ ಬಿಡಬೇಕೆಂದು ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಅಗತ್ಯ ವಸ್ತುಗಳಿಗೆ ಜಿ ಎಸ್ ಟಿ ಕೈ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿ, ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ ನಡಿಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ದೇಶದ ಜನತೆ ಎರಡು ಮೂರು ವರ್ಷಗಳಿಂದ ಕರೋನಾ ಮಹಾಮಾರಿಗೆ ತತ್ತರಿಸಿ, ತಮ್ಮ ವ್ಯವಹಾರಿಕ ಜೀವನದಲ್ಲಿ ಸಾಕಷ್ಟು ಕಷ್ಟ ನಷ್ಟ ಅನುಭವಿಸಿ ತೊಂದರೆಯ ಜೀವನ ನಡೆಸುತ್ತಿದ್ದಾರೆ.
ಇತಂಹ ಸಮಯದಲ್ಲಿ ವಸ್ತುಗಳ ಮೇಲೆ ಜಿ ಎಸ್ ಟಿ ಹೇರಿಕೆ ಹಾಕುವುದು ಎಷ್ಟರಮಟ್ಟಿಗೆ ಸರಿ ಎಂದು ಸರ್ಕಾರದ ವಿರುದ್ಧ ಗುಡುಗಿದರು.








