ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ಜಾರಿ: ಸಂಸದ ಡಾ.ಕೆ.ಸುಧಾಕರ್‌

ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ಜಾರಿ: ಸಂಸದ ಡಾ.ಕೆ.ಸುಧಾಕರ್‌

Saaksha Editor by Saaksha Editor
September 23, 2025
in Politics, State, ರಾಜಕೀಯ, ರಾಜ್ಯ
GST reform implemented with the attention of all states said Chikkaballapur MP K Sudhakar

ಕೆ ಸುಧಾಕರ್‌

Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ, ಸೆಪ್ಟೆಂಬರ್‌ 23: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ (GST) ಸುಧಾರಣೆ ತಂದಿದೆ. ರಾಜ್ಯದಲ್ಲಿ ತೆರಿಗೆ ಏರಿಕೆಯಾಗಿದ್ದರೆ, ಕೇಂದ್ರ ಸರ್ಕಾರ ತೆರಿಗೆ ಕಡಿಮೆ ಮಾಡಿ ಜನರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ (K Sudhakar) ಹೇಳಿದರು.

Related posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

December 5, 2025

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯದಶಮಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಜಿಎಸ್‌ಟಿಯನ್ನು ಸರಳೀಕರಣ ಮಾಡಿ ಜನರಿಗೆ ಕೊಡುಗೆ ನೀಡಿದ್ದಾರೆ. ಶೇ.18 ರ ತೆರಿಗೆಯನ್ನು ಶೇ.5 ಕ್ಕೆ ತಂದಿದ್ದಾರೆ. ಕೆಲವು ಸರಕು, ಸೇವೆಗಳಲ್ಲಿ ತೆರಿಗೆ ವಿನಾಯಿತಿ ನೀಡಿದ್ದಾರೆ. ನಾನು ಆರ್ಥಿಕ ಸ್ಥಾಯಿ ಸಮಿತಿಯಲ್ಲಿ ಕೆಲಸ ಮಾಡುತ್ತಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿದಿರಲಿಲ್ಲ. ಮಧ್ಯಮವರ್ಗ ಹಾಗೂ ಬಡಜನರ ಪರವಾಗಿ ನಾನು ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ರೈತರು ಬಳಕೆ ಮಾಡುವ ಟ್ರ್ಯಾಕ್ಟರ್‌, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳ ತೆರಿಗೆಯನ್ನು ಶೇ.5 ರ ವ್ಯಾಪ್ತಿಗೆ ತರಲಾಗಿದೆ. ಯುಪಿಎ ಅವಧಿಯಲ್ಲಿ ಎಲ್ಲ ಸರಕು, ಸೇವೆಗಳ ಮೇಲೆ ಶೇ.30 ರಷ್ಟು ತೆರಿಗೆ ಇತ್ತು. ಮೋದಿ ಸರ್ಕಾರ ಮೊದಲಿಗೆ ನಾಲ್ಕು ಹಂತಗಳಲ್ಲಿ ತೆರಿಗೆ ತಂದು ಈಗ ಎರಡು ಹಂತಗಳನ್ನು ಉಳಿಸಿಕೊಂಡಿದೆ. ಈ ಸುಧಾರಣೆಯಿಂದ ಎರಡೂವರೆ ಲಕ್ಷ ಕೋಟಿ ರೂ. ಜನರ ಕೈಗೆ ಸಿಗಲಿದೆ ಎಂದು ಅಂದಾಜಿಸಲಾಗಿದೆ. ಇದರಿಂದ ಖರೀದಿ ಸಾಮರ್ಥ್ಯ ಹೆಚ್ಚಲಿದೆ. ಒಂದು ಕಾರು ಖರೀದಿಸುವವರಿಗೆ ಎರಡು ಲಕ್ಷ ರೂ. ನಷ್ಟು ಉಳಿತಾಯವಾಗಲಿದೆ. ಆರೋಗ್ಯ ವಿಮೆ ಹಾಗೂ ಜೀವ ವಿಮೆ ಮಾಡಿಸಲು ಯಾವುದೇ ತೆರಿಗೆ ಇಲ್ಲ. ಬಹಳಷ್ಟು ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಫಿಟ್‌ನೆಸ್‌ ಉಪಕರಣಗಳಿಗೆ ತೆರಿಗೆ ತೆಗೆದುಹಾಕಲಾಗಿದೆ ಎಂದರು.

ಇದನ್ನೂ ಓದಿ: ರಾಜ್ಯದ ಜನತೆಗೆ ಗುಡ್‌ ನ್ಯೂಸ್‌: ಕೆಎಂಎಫ್‌ ನಂದಿನಿ ಉತ್ಪನ್ನಗಳ ಬೆಲೆಯಲ್ಲಿ ಭಾರಿ ಇಳಿಕೆ

ಕೇಂದ್ರ ಸರ್ಕಾರ 144 ವಂದೇ ಭಾರತ್‌ ರೈಲುಗಳ ಕಾರ್ಯಾಚರಣೆ ನಡೆಸುತ್ತಿದೆ. ಯುಪಿಎ ಕಾಲದಲ್ಲಿದ್ದ ವಿಮಾನ ನಿಲ್ದಾಣಗಳು ಈಗ ದುಪ್ಪಟ್ಟಾಗಿದೆ. ರಾಷ್ಟ್ರೀಯ ಹೆದ್ದಾರಿಗಳ ಉದ್ದ ಶೇ.60 ರಷ್ಟು ಹೆಚ್ಚಿದೆ. ಡಿಬಿಟಿ ವ್ಯವಸ್ಥೆಯಡಿ ಶೇ.90 ರಷ್ಟು ಹಣ ನೇರವಾಗಿ ಜನರ ಖಾತೆಗೆ ಹೋಗುತ್ತಿದೆ. ಆಪರೇಶನ್‌ ಸಿಂದೂರದಲ್ಲಿ ಭಾರತೀಯ ಯೋಧರು ಉಗ್ರರ ತಾಣಗಳನ್ನು ಧ್ವಂಸ ಮಾಡಿದ್ದಾರೆ. ಯುಪಿಎಗೆ ಹೋಲಿಸಿದರೆ ಎನ್‌ಡಿಎ ಸರ್ಕಾರ ರಕ್ಷಣಾ ವಲಯಕ್ಕೆ 34 ಪಟ್ಟು ಅಧಿಕ ಅನುದಾನ ನೀಡಿದೆ. ಹೀಗೆ ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಸದ್ಬಳಕೆ ಮಾಡುತ್ತಿದೆ ಎಂದರು.

ಯುಪಿಎ ಅವಧಿಯಲ್ಲಿ ಹಾಲಿನ ಉತ್ಪನ್ನಗಳಿಗೆ 18% ತೆರಿಗೆ ಇತ್ತು. ಐಷಾರಾಮಿ ಕಾರ್‌ಗಳಿಗೂ ಅಷ್ಟೇ ಇತ್ತು. ಎನ್‌ಡಿಎ ಸರ್ಕಾರ ಹಾಲಿಗೆ ತೆರಿಗೆ ತೆಗೆದುಹಾಕಿದೆ. ಯುಪಿಎ ಅವಧಿಯಲ್ಲಿ ಸಿಮೆಂಟ್‌, ಪೇಯಿಂಟ್‌, ಟಿವಿ, ಫ್ರಿಡ್ಜ್‌ಗೆ 30% ಇದ್ದು, ಈಗ ಅದು 18% ಗೆ ಇಳಿದಿದೆ. ಮಹಿಳೆಯರ ಸ್ಯಾನಿಟರಿ ಪ್ಯಾಡ್‌ಗೆ 13% ತೆರಿಗೆ ಇತ್ತು. ʼಸ್ವಸ್ಥ ನಾರಿ, ಸಶಕ್ತ ಪರಿವಾರʼ ಎಂಬ ಘೋಷಣೆ ನೀಡಿರುವ ಪ್ರಧಾನಿ ಮೋದಿ ಸ್ಯಾನಿಟರಿ ಪ್ಯಾಡ್‌ ಮೇಲಿನ ತೆರಿಗೆ ರದ್ದು ಮಾಡಿದ್ದಾರೆ. ಮಿನರಲ್‌ ನೀರಿನ ಬಾಟಲ್‌ಗೆ ಇದ್ದ ಶೇ.28 ರ ತೆರಿಗೆ ಶೇ.5 ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಸುಲಿಗೆ ಟ್ಯಾಕ್ಸ್‌

ಕಾಂಗ್ರೆಸ್‌ ಸರ್ಕಾರಕ್ಕೆ ಜಿಎಸ್‌ಟಿ ಎಂದರೆ ಗ್ಯಾರಂಟಿ ಸುಲಿಗೆ ಟ್ಯಾಕ್ಸ್‌. 38 ರೂ. ಇದ್ದ ಹಾಲಿಗೆ 47 ರೂ. ಆಗಿದೆ. ಬಸ್‌ ದರ 100 ಕಿ.ಮೀ. 100 ಇದ್ದಿದ್ದು, 115 ರೂ. ಆಗಿದೆ. ಪೆಟ್ರೋಲ್‌ಗೆ 99 ರೂ. ಇದ್ದಿದ್ದು, 103 ರೂ. ಆಗಿದೆ. ಡೀಸೆಲ್‌ಗೆ 8% ದರ ಹೆಚ್ಚಿದೆ. ನೀರಿನ ಶುಲ್ಕ 55% ಹೆಚ್ಚಾಗಿದೆ. ವಿದ್ಯುತ್‌ ದರ 120 ರೂ. ನಿಂದ 145 ರೂ.ಗೆ ಏರಿದೆ. ಸ್ಟಾಂಪ್‌ ಡ್ಯೂಟಿ 150% ಹೆಚ್ಚಿದೆ. ಅಫಿಡವಿಟ್‌ಗೆ 20 ರೂ. ನಿಂದ 100 ರೂ.ಗೆ ಏರಿಸಲಾಗಿದೆ. ಬಿಬಿಎಂಪಿಯಲ್ಲಿ ಕಸಕ್ಕೆ ಹೊಸದಾಗಿ 400 ರೂ. ಶುಲ್ಕ ವಿಧಿಸಲಾಗಿದೆ. ಹೊಸ ವಾಹನಗಳ ನೋಂದಣಿಗೆ 500 ರೂ. ನಿಂದ 1,000 ರೂ. ಹೆಚ್ಚಿದೆ. ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕವನ್ನು 100 ರಿಂದ 500 ರೂ. ಗೆ ಏರಿಸಲಾಗಿದೆ ಎಂದು ದೂರಿದರು.

ದಲಿತರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿಗೆ ಬಳಸಲಾಗಿದೆ. ಪ್ರಸಕ್ತ ಸಾಲಿನ 2025-26 ನೇ ಬಜೆಟ್ ನಲ್ಲಿ SCSP/TSP ಅಡಿ 42,017.51 ಕೋಟಿ ರೂ. ಅನುದಾನದಲ್ಲಿ 11,896.84 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತಾಡುವ ಕಾಂಗ್ರೆಸ್‌ ನಾಯಕರು, ದಲಿತರ ನಿಗಮಗಳಿಗೆ ಅನುದಾನ ಕಡಿತ ಮಾಡಿದ್ದಾರೆ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅನುದಾನದಲ್ಲಿ 90 ಕೋಟಿ ರೂ. ಅನುದಾನ ಕಡಿತ, ವಿಶ್ವಕರ್ಮ ನಿಗಮಕ್ಕೆ 12 ಕೋಟಿ ರೂ. ಅನುದಾನ ಕಡಿತ, ಉಪ್ಪಾರ ನಿಗಮಕ್ಕೆ 7 ಕೋಟಿ ರೂ. ಅನುದಾನ ಕಡಿತ ಮಾಡಿದ್ದಾರೆ ಎಂದರು.

ಶಾಲೆಗಳಿಗೆ ಅನುದಾನ ಕೊಡದೆ ಕೊಠಡಿಗಳ ದುರಸ್ತಿಗೆ ಹಣವಿಲ್ಲ. ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರೇ ಭ್ರಷ್ಟಾಚಾರದಲ್ಲಿ ನಂ.1 ರಾಜ್ಯ ಎಂದಿರುವುದರ ಜೊತೆಗೆ ಗ್ಯಾರಂಟಿಯಿಂದಾಗಿ ಹಣವಿಲ್ಲ ಎಂದಿದ್ದಾರೆ. ಮಲ್ಲಿಕಾರ್ಜನ ಖರ್ಗೆಯವರೇ ಮಂಕರಿ ಮಣ್ಣು ಹಾಕಲು ಅನುದಾನವಿಲ್ಲ ಎಂದಿದ್ದಾರೆ ಎಂದರು.

ರಾಜ್ಯದ ಸಚಿವರಿಂದ ಸಹಿ

ತೆರಿಗೆ ಇಳಿಕೆ ಮಾಡಿರುವುದರಿಂದ ರಾಜ್ಯಕ್ಕೆ ನಷ್ಟವಾಗಿದೆ ಎಂದು ಈಗ ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿರುವ 33 ಸದಸ್ಯರು ಕೂಡ ಇದಕ್ಕೆ ಒಪ್ಪಬೇಕಾಗುತ್ತದೆ. ರಾಜ್ಯ ಸರ್ಕಾರದ ಪರವಾಗಿ ಸಚಿವ ಕೃಷ್ಣ ಭೈರೇಗೌಡರು ಇದಕ್ಕೆ ಸಹಿ ಹಾಕಿದ್ದಾರೆ. ಸರಿ ಇಲ್ಲ ಎಂದಮೇಲೆ ಸಹಿ ಹಾಕಿದ್ದು ಏಕೆ? ಈ ಸುಧಾರಣೆ ಬಗ್ಗೆ ಒಂದು ವರ್ಷದಿಂದಲೇ ಸಿದ್ಧತೆ ನಡೆದಿದೆ. ಕೇಂದ್ರ ಸರ್ಕಾರಕ್ಕೆ ಆದಾಯ ಕಡಿಮೆಯಾದರೂ ಜನರ ಹಿತದೃಷ್ಟಿಯಿಂದ ಈ ಕ್ರಮ ತರಲಾಗಿದೆ. ಈಗ ಹಣದುಬ್ಬರ 2.7% ಹಾಗೂ ಆರ್ಥಿಕ ಬೆಳವಣಿಗೆ ದರ 7.9% ಇದೆ. ಹೀಗೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಆರ್ಥಿಕ ಚೈತನ್ಯ ನೀಡಿದ್ದಾರೆ ಎಂದರು.

ಉದ್ಯಮಗಳು ಹಾಗೂ ವ್ಯಾಪಾರಿಗಳು ಹೊಸ ಜಿಎಸ್‌ಟಿ ಜಾರಿ ಮಾಡುತ್ತಿದ್ದಾರೆ. ಯಾರಾದರೂ ಜಾರಿ ಮಾಡದೇ ಇದ್ದರೆ ಅದನ್ನು ಪ್ರಶ್ನೆ ಮಾಡಬೇಕಾಗುತ್ತದೆ. ಈಗಾಗಲೇ ಜನರಿಗೆ ಜಿಎಸ್‌ಟಿಯ ಲಾಭ ದೊರೆತಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: #ಕರ್ನಾಟಕBJPChikkaballapur MP K SudhakarGSTGST ReformGST Reform 2025India GST reformK Sudhakar WifeK.SudhakarkarnatakaMP K SudhakarNarendra modiNDAಕೆ ಸುಧಾಕರ್‌ಕೇಂದ್ರ ಸರ್ಕಾರಜಿಎಸ್‌ಟಿನರೇಂದ್ರ ಮೋದಿಸಂಸದ ಕೆ ಸುಧಾಕರ್‌
ShareTweetSendShare
Join us on:

Related Posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

by Shwetha
December 5, 2025
0

ಬೆಂಗಳೂರು: ರಾಜ್ಯ ಸರ್ಕಾರವು ಮಹಿಳಾ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಋತುಚಕ್ರದ ರಜೆಯನ್ನು (Menstrual Leave) ಘೋಷಿಸುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರವನ್ನು...

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

by Shwetha
December 5, 2025
0

ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸರ್ಕಾರಿ ಹಾಸ್ಟೆಲ್ಗಳಲ್ಲಿ ಬಡ ಹೆಣ್ಣು ಮಕ್ಕಳ ಸುರಕ್ಷತೆ ಆತಂಕಕ್ಕೀಡಾಗಿದ್ದು, ಈ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

by Shwetha
December 5, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರಿಗೆ ಸಲ್ಲಿಸಿರುವ ಗೌಪ್ಯ ವರದಿಯೊಂದು ರಾಜ್ಯ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram