ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿ.ಟಿ.ದೇವೇಗೌಡ ಸ್ಪಷ್ಟನೆ
ಬೆಂಗಳೂರು : ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಇಂದು ಈ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಯಾವಾಗ ಏನೂ ಆಗುವುದೋ ಗೊತ್ತಿಲ್ಲ. ಈಗಿನ ರಾಜಕಾರಣ ಆ ಪರಿಸ್ಥಿತಿಗೆ ಬಂದು ನಿಂತಿದೆ.
ಮುಂದಿನ ಚುನಾವಣೆಯಲ್ಲಿ ಎಲ್ಲವೂ ನಿರ್ಧಾರ ಆಗಲಿದೆ. ಚುನಾವಣೆ ಇನ್ನೂ ಎರಡು ವರ್ಷ ಬಾಕಿಯಿದೆ. ಇಡೀ ದೇಶ ಕೊರೊನಾದಿಂದ ತತ್ತರಿಸುತ್ತಿದೆ.
ಹಳ್ಳಿಯಿಂದ ದೆಹಲಿವರೆಗೆ ಕೊರೊನಾ ಇದೆ. ಇದರ ಬಗ್ಗೆ ನಾವೆಲ್ಲರೂ ಗಮನಹರಿಸಿದ್ದೇವೆ. ಚುನಾವಣೆ ಇನ್ನೂ 23 ತಿಂಗಳು ಇದೆ ಎಂದಿದ್ದಾರೆ.
ಮುಂದುವರೆದು ಮಾತನಾಡಿ, ಸಿದ್ದರಾಮಯ್ಯ ಆರೇ ತಿಂಗಳಲ್ಲಿ ಕ್ಷೇತ್ರ ಬದಲಾವಣೆ ಮಾಡಿದರು. ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗುತ್ತಾರೆ ಎಂದು ಯಾರೂ ಕಂಡಿರಲಿಲ್ಲ.
ಹೆಚ್ಚಿನ ಸ್ಥಾನ ಗಳಿಸಿದ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಅಂದುಕೊಂಡಿದ್ದೆವು. ಆದ್ರೆ ಮೈತ್ರಿ ಸರ್ಕಾರ ಅಧಿಕಾರಕ್ಕ ಬಂತು.
ನಂತರ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದ ಬಿ.ಎಸ್.ಯಡಿಯೂರಪ್ಪ ಹದಿನೈದೇ ದಿನದಲ್ಲಿ ಸಿಎಂ ಆದರು. ಹಾಗಾಗಿ, ಯಾವಾಗ ಏನೂ ಆಗುತ್ತದೆ ಎಂದು ಭವಿಷ್ಯ ಹೇಳಲಾಗದು ಎಂದರು.
ಇನ್ನು ಕೊರೊನಾ ಸೋಂಕಿನಿಂದಾಗಿ ರಾಜ್ಯದ ಅಭಿವೃದ್ಧಿ ನಿಂತು ಹೋಗಿದೆ. ಅನುದಾನನೂ ಇಲ್ಲ, ಏನೂ ಇಲ್ಲ. ರಾಜಕಾರಣಿಗಳು ಬಹಳ ಕಷ್ಟದಲ್ಲಿದ್ದೇವೆ ಎಂದು ಅಸಹಾಯಕತೆ ತೋಡಿಕೊಂಡರು.









