ಬೆಂಗಳೂರು: ಪಕ್ಷದ ನಿಯಮ ಮೀರಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಇಂದು ವಿಧಾನಪರಿಷತ್ ಚುನಾವಣೆಯಲ್ಲಿ ಮತಚಲಾವಣೆ ಮಾಡಿದ್ದಾರೆ. ನಿನ್ನೆ ನಡೆದ ಜೆಡಿಎಸ್ ಶಾಸಕರ ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾಗವಹಿಸಬಾರದೆಂದು ಪಕ್ಷ ನಿರ್ಧಾರ ಮಾಡಿತ್ತು. ಆದ್ರೆ ಆದರೆ ಇಂದು ಶಾಸಕ ಜಿ.ಟಿ.ದೇವೇಗೌಡ ಮತದಾನ ಮಾಡಿಪಕ್ಷದ ನಿಯಮವನ್ನು ಮೀರಿದ್ದಾರೆ.
3 ವರ್ಷ ಯಡಿಯೂರಪ್ಪ ಸರ್ಕಾರ ಗ್ಯಾರಂಟಿ”
ಮತದಾನ ಮಾಡಿದ ನಂತರ ಮಾತನಾಡಿದ ಜಿ.ಟಿ.ದೇವೇಗೌಡ, ‘ನಾನು ಮತದಾನ ಮಾಡಿದ್ದೇನೆ, ಯಾರಿಗೆ ಮತದಾನ ಮಾಡಿದ್ದೇನೆ ಎಂದು ಹೇಳುವ ಆಗಿಲ್ಲ ಎಂದ್ರು. ಅಲ್ಲದೆ ಮುಂದಿನ ಮೂರು ವರ್ಷ ಬಿ.ಎಸ್ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಹೇಳಿದ್ದೇನು?
ಈಗ ಅವರು ನಮ್ಮಲ್ಲಿ ಇದ್ದಾರಾ. ಅವರು ಹಲವಾರು ಹೇಳಿಕೆಗಳನ್ನು ಕೊಟ್ಟುಕೊಂಡಿದ್ದಾರೆ. ಇಲ್ಲಿರ್ತಾರೋ, ಎಲ್ಲಿರ್ತಾರೋ ಎಂದು ಕಾದು ನೋಡೋಣ. ಮತದಾನದಲ್ಲಿ ಭಾಗವಹಿಸೋದು ಬೇಡ ಎಂದು ಶಾಸಕಾಂಗ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದೇವೆ. ಶಾಸಕಾಂಗ ಪಕ್ಷಕ್ಕೆ ಅಗೌರವ ತೋರುವುದು ಅವರಿಗೆ ಬಿಟ್ಟದ್ದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.








