ಗದಗ: ನಮ್ಮ ಸರ್ಕಾರಕ್ಕೆ ಗ್ಯಾರಂಟಿಗಳೇ ತಂದೆ-ತಾಯಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದ್ದಾರೆ.
ರೋಣ ಪಟ್ಟಣದ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ವಿವಿಧ ಯೋಜನೆಗಳ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾವು ಅಧಿಕಾರಕ್ಕೂ ಮುನ್ನ ಘೋಷಿಸಿದ್ದ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಅವುಗಳನ್ನು ಉಳಿಸಿಕೊಂಡು ಹೋಗುತ್ತೇವೆ. ಅವು ನಮಗೆ ತಂದೆ -ತಾಯಿ ಇದ್ದಂತೆ ಎಂದು ಹೇಳಿದ್ದಾರೆ.
ಅನ್ನಭಾಗ್ಯದಲ್ಲಿ ದಾಸೋಹ, ಗೃಹಲಕ್ಷ್ಮೀ ಯೋಜನೆಯಲ್ಲಿ ಸಬಲೀಕರಣ, ಗೃಹಜ್ಯೋತಿ ಮೂಲಕ ಸಮಾಜಕ್ಕೆ ಬೆಳಕು, ಶಕ್ತಿ ಯೋಜನೆ ಮೂಲಕ ಮಹಿಳೆಗೆ ಸ್ವಾತಂತ್ರ್ಯ, ಯುವನಿಧಿ ಮೂಲಕ ಕಾಯಕವನ್ನು ನೀಡಲಾಗಿದೆ ಎಂದಿದ್ದಾರೆ.
ಬಿಜೆಪಿಗರು ಭಾವನೆಗಳ ಜೊತೆ ರಾಜಕಾರಣ ಮಾಡಿದರೆ. ನಾವು ನಮ್ಮ ನಮ್ಮ ಗ್ಯಾರಂಟಿ ಮೂಲಕ ಜನರ ನೋವಿಗೆ ಸ್ಪಂದಿಸುತ್ತಿದ್ದೇವೆ ಎಂದಿದ್ದಾರೆ.