ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ನಟ ಅಭಿಷೇಕ್ ಬಚ್ಚನ್ ಗೆ ಕೊರೊನಾ ಪಾಸಿಟಿವ್ ಧೃಡಪಟ್ಟ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರ ಆರೋಗ್ಯದಲ್ಲಿ ಕ್ರಮೇಣ ಚೇತರಿಕೆ ಕಂಡುಬಂದಿದ್ದು, ಶೀಘ್ರದಲ್ಲಿಯೇ ಡಿಶ್ಚಾರ್ಜ್ ಆಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ.
ಜುಲೈ 11 ರಂದು ಅಮಿತಾಬ್ ಮತ್ತು ಅಭಿಷೇಕ್ ಸಾಮಾಜಿಕ ಜಾಲತಾಣದ ಮೂಲಕ ತಮಗೆ ಕೊರೊನಾ ಬಂದಿರುವ ಬಗ್ಗೆ ಮಾಹಿತಿ ನೀಡಿದ್ದರು. ಇನ್ನೂ ನಟಿ ಐಶ್ವರ್ಯ ರೈ ಬಚ್ಚನ್ ಹಾಗೂ ಆರಾಧ್ಯ ಬಚ್ಚನ್ ಗೂ ಸಹ ಕೊರೊನಾ ಪಾಸಿಟಿವ್ ಬಂದಿದ್ದು, ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅಭಿಷೇಕ್ ಹಾಗೂ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದ್ದು, ಅಭಿಮಾನಿಗಳು ನಿರಾಳರಾಗಿದ್ದಾರೆ.







