Belagavi: ಉಪನ್ಯಾಸಕನಿಗೆ ಧರ್ಮದೇಟು ನೀಡಿದ ಉಪನ್ಯಾಸಕಿಯರು

1 min read
Govt Sardar PU College Belagavi Saaksha Tv

ಉಪನ್ಯಾಸಕನಿಗೆ ಧರ್ಮದೇಟು ನೀಡಿದ ಉಪನ್ಯಾಸಕಿಯರು

ಬೆಳಗಾವಿ: ಉಪನ್ಯಾಸಕಿಯರು, ಉಪನ್ಯಾಸಕನಿಗೆ ಕಾಲೇಜಿನಲ್ಲೇ ಧರ್ಮದೇಟು ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನ ಉಪನ್ಯಾಸಕ ಅಮಿತ್ ಬಸವಮೂರ್ತಿ ಕಾಲಜಿನಲ್ಲಿ ಉನ್ಯಾಸಕಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಇದರಿಂದ ರೋಸಿ ಹೋಗಿದ್ದ ಉಪನ್ಯಾಸಕಿಯರು, ಉಪನ್ಯಾಸಕನಿಗೆ ಏಪ್ರಿಲ್ 12 ರಂದು, ಧರ್ಮದೇಟು ನಿಡಿದ್ದಾರೆ.

Govt Saradar PU College Belagavi  Saaksha Tv

ಇಂಗ್ಲಿಷ್ ವಿಭಾಗದ ಖಾಯಂ ಉಪನ್ಯಾಸಕ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಮಿತ್ ಬಸವಮೂರ್ತಿ ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸಿ ಉಪನ್ಯಾಸಕಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ. ಅಲ್ಲದೇ ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಉಪನ್ಯಾಸಕಿಯರ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಈ ವಿಚಾರವಾಗಿ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಉಪನ್ಯಾಸಕಿಯರೆಲ್ಲಾ ಸೇರಿ ಆರೋಪಿಗೆ ಕಾಲಿನಿಂದ ಒದ್ದು, ಚಪ್ಪಲಿ ಹಾಗೂ ಕೋಲಿನಿಂದ ಧರ್ಮದೇಟು ನೀಡಿದ್ದಾರೆ. ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ಅತಿಥಿ ಉಪನ್ಯಾಸಕಿಯರು ಖಾಯಂ ಉಪನ್ಯಾಸಕನಿಗೆ ಹಿಗ್ಗಾಮುಗ್ಗ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd