Gujarat Election : ಗುಜರಾತ್ ನಲ್ಲಿ ಬೀಡುಬಿಟ್ಟ ರಾಷ್ಟ್ರ ನಾಯಕರು – ಬಿರುಸಿನ ಪ್ರಚಾರ
ಗುಜರಾತ್ ನಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೌರಾಷ್ಟ್ರ ಪ್ರದೇಶದ ಸುರೇಂದ್ರನಗರದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.
ಮೊದಲ ಹಂತದಲ್ಲಿ ಸೌರಾಷ್ಟ್ರ, ದಕ್ಷಿಣ ಗುಜರಾತ್ ಮತ್ತು ಕಚ್‌ನ 89 ಸ್ಥಾನಗಳಿಗೆ ಡಿಸೆಂಬರ್ 1 ರಂದು ಮತದಾನ ನಡೆಯಲಿದೆ. ಎರಡನೇ ಹಂತದ ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, ಡಿಸೆಂಬರ್ 5 ರಂದು ಮತದಾನ ನಡೆಯಲಿದೆ.
ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರವನ್ನು ಚುರುಕುಗೊಳಿಸಿವೆ. ಬಿಜೆಪಿ ನಾಯಕ ಮತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪಕ್ಷದ ಪರ ಪ್ರಚಾರದಲ್ಲಿ ತೊಡಗಿದ್ದಾರೆ.
ರಾಜ್ಯದಲ್ಲಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಕಿಕ್‌ಸ್ಟಾರ್ಟ್ ಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಇಂದು ರಾಜ್ಯಕ್ಕೆ ಬಂದಿದ್ದಾರೆ. ರಾಹುಲ್ ಗಾಂಧಿಯವರು ಸೂರತ್ ಮತ್ತು ರಾಜ್‌ಕೋಟ್‌ನಲ್ಲಿ ತಲಾ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇನ್ನೊಂದೆಡೆ ಆಮ್ ಆದ್ಮಿ ಪಕ್ಷದ ಸ್ಟಾರ್ ಪ್ರಚಾರಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಅವರು ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನ ವಿವಿಧ ಸ್ಥಳಗಳಲ್ಲಿ ರೋಡ್ ಶೋ ನಡೆಸುವ ಮೂಲಕ ಇಂದು ತೀವ್ರ ಪ್ರಚಾರ ನಡೆಸಲಿದ್ದಾರೆ.
Gujarat Election : All political parties accelerate poll campaigning for first phase of Gujarat Assembly polls