Gujarat Election : ಡಿಸೆಂಬರ್ 12ಕ್ಕೆ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ…
ಡಿಸೆಂಬರ್ 12 ರಂದು ಮುಂದಿನ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಗುಜರಾತ್ನಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲು ಸಜ್ಜಾಗಿದ್ದು, ಗುಜರಾತ್ನ ಮುಂದಿನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಿ ಆರ್ ಪಾಟೀಲ್ ಗುರುವಾರ ಘೋಷಿಸಿದ್ದಾರೆ.
ಡಿಸೆಂಬರ್ 12 ರಂದು ರಾಜ್ಯ ರಾಜಧಾನಿಯ ಹೊಸ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ನಲ್ಲಿರುವ ಹೆಲಿಪ್ಯಾಡ್ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವಿನ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಾಟೀಲ್, ಗುಜರಾತ್ ಜನತೆಗೆ ಧನ್ಯವಾದ ಅರ್ಪಿಸಿದರು ಮತ್ತು ಪ್ರಧಾನಿ ಮೋದಿ ಅವರು ಐತಿಹಾಸಿಕ ವಿಜಯದ ಶಿಲ್ಪಿ ಎಂದು ಬಣ್ಣಿಸಿದರು.
ಸುದ್ದಿಗೋಷ್ಠಿಯಲ್ಲಿ ಸಿಎಂ ಭೂಪೇಂದ್ರ ಪಟೇಲ್ ಕೂಡ ಉಪಸ್ಥಿತರಿದ್ದರು. ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿದ ಸಿಎಂ, “ಗುಜರಾತ್ ಜನರು ಮತ್ತೊಮ್ಮೆ ರಾಷ್ಟ್ರವಿರೋಧಿ ಅಂಶಗಳನ್ನು ನಿರಾಕರಿಸಿದ್ದಾರೆ ಮತ್ತು ರಾಷ್ಟ್ರೀಯವಾದಿಗಳಿಗೆ ಸೇವೆ ಮಾಡಲು ಅವಕಾಶವನ್ನು ನೀಡಿದ್ದಾರೆ” ಎಂದು ಹೇಳಿದರು.
Gujarat Election: Bhupendra Patel sworn in as Chief Minister on December 12