Gujarat Election: ಗುಜರಾತ್ ಮೊದಲ ಹಂತದ ಚುನಾವಣಾ ಪ್ರಚಾರಕ್ಕೆ ಇಂದು ತೆರೆ…
ಗುಜರಾತ್ ನಲ್ಲಿ ಮೊದಲ ಹಂತದ ಚುನಾವಣಾ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಡಿಸೆಂಬರ್ 1 ರಂದು ನಡೆಯಲಿರುವ ಎರಡನೇ ಹಂತದ ಮತದಾನದತ್ತ ಎಲ್ಲರ ಕಣ್ಣು ನೆಟ್ಟಿದೆ.
ಮೊದಲ ಹಂತದಲ್ಲಿ 19 ಜಿಲ್ಲೆಗಳ 89 ಸ್ಥಾನಗಳಿಗೆ ಒಟ್ಟು 788 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಸೂರತ್ನ ಲಿಂಬಾಯತ್ ವಿಧಾನಸಭಾ ಕ್ಷೇತ್ರದಿಂದ ಗರಿಷ್ಠ 44 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸೂರತ್ನ ಮಹುವ ಮತ್ತು ನವಸಾರಿ ಜಿಲ್ಲೆಯ ಗಾಂದೇವಿಯಲ್ಲಿ ಕನಿಷ್ಠ ಮೂವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮೊದಲ ಹಂತದಲ್ಲಿ ಸ್ಪರ್ಧಿಸಿರುವ 788 ಅಭ್ಯರ್ಥಿಗಳ ಪೈಕಿ 211 ಮಂದಿ ಕೋಟ್ಯಾಧಿಪತಿಗಳಿದ್ದಾರೆ. ಕೋಟ್ಯಾಧಿಪತಿ ಅಭ್ಯರ್ಥಿಗಳ ಸರಾಸರಿ ಆಸ್ತಿ 2.88 ಕೋಟಿ ರೂ. ಕೆಲವು ಅಭ್ಯರ್ಥಿಗಳು ಕಡು ಬಡವರಿದ್ದಾರೆ. ಇರಲು ಸ್ವಂತ ಮನೆಯೂ ಇಲ್ಲದವರು ಇದ್ದು, ಒಬ್ಬ ಅಭ್ಯರ್ಥಿ ಶೂನ್ಯ ಆಸ್ತಿಯನ್ನ ಘೋಷಿಸಿದ್ದಾರೆ.
ಕೆಲವು ಅಭ್ಯರ್ಥಿಗಳು ಸಾಕಷ್ಟು ಆಸ್ತಿ ಹೊಂದಿದ್ದರೂ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಅವರಲ್ಲಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ ಮತ್ತು ಎಎಪಿ ಅಭ್ಯರ್ಥಿಗಳು ಸೇರಿದ್ದಾರೆ.
ಬಿಜೆಪಿಯ ಬಹುತೇಕ ಅಭ್ಯರ್ಥಿಗಳು ಕೋಟ್ಯಾಧಿಪತಿಗಳು
ಗುಜರಾತ್ ಚುನಾವಣೆಯ ಮೊದಲ ಹಂತದಲ್ಲಿ ಭಾರತೀಯ ಜನತಾ ಪಕ್ಷವು ಗರಿಷ್ಠ ಸಂಖ್ಯೆಯ ಅಭ್ಯರ್ಥಿಗಳಲ್ಲಿ ಕೋಟ್ಯಾಧಿಪತಿಗಳಿಗೆ ಟಿಕೆಟ್ ನೀಡಿದೆ. ಅಂಕಿಅಂಶಗಳ ಪ್ರಕಾರ ಶೇ.89 ರಷ್ಟು ಬಿಜೆಪಿ ಅಭ್ಯರ್ಥಿಗಳು ಕೋಟ್ಯಾಧಿಪತಿಗಳು. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ನ 75 ಪ್ರತಿಶತ ಮತ್ತು ಎಎಪಿಯ 38 ಪ್ರತಿಶತ ಅಭ್ಯರ್ಥಿಗಳು ಕೋಟ್ಯಾಧಿಪತಿಗಳ ಪಟ್ಟಿಯಲ್ಲಿದ್ದಾರೆ.
Gujarat Election: Campaigning ends for first phase of Gujarat assembly elections