Gujarat election : ಗುಜರಾತ್ ಚುನಾವಣೆಯ ಎರಡನೇ ಹಂತದ ಪ್ರಚಾರ ಇಂದು ಮುಕ್ತಾಯ…
ಗುಜರಾತ್ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಪ್ರಚಾರ ಇಂದು ಡಿಸೆಂಬರ್ 3 ರಂದು ಸಂಜೆ 5 ಗಂಟೆಗೆ ಕೊನೆಗೊಳ್ಳಲಿದೆ. ಎಲ್ಲ ರಾಜಕೀಯ ಪಕ್ಷಗಳ ಹಿರಿಯ ನಾಯಕರು ಮತದಾರರನ್ನು ಸೆಳೆಯಲು ಕೊನೆಯ ಹಂತದ ಪ್ರಯತ್ನ ನಡೆಸುತ್ತಿದ್ದಾರೆ.
ಸೋಮವಾರ ಮತದಾನ ನಡೆಯಲಿದ್ದು, 69 ಮಹಿಳೆಯರು ಸೇರಿದಂತೆ ಒಟ್ಟು 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪ್ರಚಾರದ ಕೊನೆಯ ದಿನದಂದು, ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಮತ್ತು ಪುರಶೋತಮ್ ರೂಪಲಾ, ಮತ್ತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವಾರು ಹಿರಿಯ ಬಿಜೆಪಿ ನಾಯಕರು ವಿವಿಧ ಸ್ಥಳಗಳಲ್ಲಿ ರ್ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ.
ಎಎಪಿ ನಾಯಕ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಸಂಸದ ಸಂಜಯ್ ಸಿಂಗ್ ಮತ್ತು ಸ್ಥಳೀಯ ಯುವ ಮುಖಂಡ ಅಲ್ಪೇಶ್ ಕಥಿರಿಯಾ ಕೂಡ ಪಕ್ಷದ ಅಭ್ಯರ್ಥಿಗಳ ಪರ ಮತ ಸೆಳೆಯಲು ಕಸರತ್ತು ನಡೆಸಿದ್ದಾರೆ.
ಕಾಂಗ್ರೆಸ್ ನಾಯಕ ರಘು ಶರ್ಮಾ ಅವರು ಅಹಮದಾಬಾದ್ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಈ ಬಾರಿ ಗುಜರಾತ್ನಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಈ ಬಾರಿ ಹೈ ಪ್ರೊಫೈಲ್ ಘಟ್ಲೋಡಿಯಾ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸುತ್ತಿದ್ದಾರೆ. 2017 ರ ಚುನಾವಣೆಯಲ್ಲಿ, ಭೂಪೇಂದ್ರ ಪಟೇಲ್ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಇಲ್ಲಿ ಗೆದ್ದಿದ್ದರು.
Gujarat election: Campaigning for the second phase of Gujarat election ends today…