ಈಗಲೇ ಎಲೆಕ್ಷನ್ ನಡೆದರೇ ಆಮ್ ಆದ್ಮಿ ಸರ್ಕಾರ ರಚಿಸಲಿದೆ – ಅರವಿಂದ್ ಕೇಜ್ರಿವಾಲ್..
ಗುಜರಾತ್ ವಿಧಾನಸಭೆ ಚುನಾವಣೆ ಈಗಿಂದೀಗಲೇ ನಡೆದರೆ ಆಮ್ ಆದ್ಮಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇಂಟಲಿಜೆನ್ಸ್ ಬ್ಯೂರೋ ವರದಿಯಲ್ಲಿ ಅವರ ಪಕ್ಷ ಅಲ್ಪ ಮತಗಳ ಅಂತರದಿಂದ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಚುನಾವಣೆಗೆ ಇನ್ನೂ ಸ್ವಲ್ಪ ಸಮಯವಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.
ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಪಕ್ಷದ ಮತಗಳನ್ನು ಕದಿಯಲು ಬಿಜೆಪಿ ಮತ್ತು ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿವೆ ಎಂದು ಆರೋಪಿಸಿದರು. ಇಂಟಲಿಜೆನ್ಸ್ ಬ್ಯೂರೋ ವರದಿಯ ಬಗ್ಗೆ ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಈಗಲೇ ಗುಜರಾತ್ ವಿಧಾನಸಭೆ ಚುನಾವಣೆ ನಡೆದರೆ ಆಮ್ ಆದ್ಮಿ ಪಕ್ಷ ಸರ್ಕಾರ ರಚಿಸಲಿದೆ, ಆದರೆ ಅಲ್ಪ ಮತಗಳ ಅಂತರದಿಂದ ಗೆಲ್ಲಲಿದೆ ಎಂದು ವರದಿ ಹೇಳಿದೆ. ಈ ವರದಿ ನೋಡಿ ಬಿಜೆಪಿ ಬೆಚ್ಚಿಬಿದ್ದಿದೆ ಕಾಂಗ್ರೆಸ್ ಮತ್ತು ಬಿಜೆಪಿ ಉನ್ನತ ಮಟ್ಟದ ಸಭೆ ನಡೆಸಲು ಆರಂಭಿಸಿವೆ. ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸಲು ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ತಮ್ಮ ಪಕ್ಷವನ್ನು ಸೋಲಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿವೆ. ಬಿಜೆಪಿಯವರು ತಮ್ಮ ಪಕ್ಷದ ಮತಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಿ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಪ್ರತಿ ಹಸುವಿಗೆ 40 ರೂಪಾಯಿ ನೀಡುತ್ತಿದ್ದು, ಗುಜರಾತ್‌ನಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ಜಾರಿಗೆ ತರುವುದಾಗಿ ಹೇಳಿದ್ದಾರೆ. ರಸ್ತೆಯಲ್ಲಿ ಅಡ್ಡಾಡುವ ಗೋವುಗಳಿಗೆ ಪ್ರತಿ ಜಿಲ್ಲೆಯಲ್ಲಿ ಶೆಡ್‌ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು. ಗೋವುಗಳ ಅನುಕೂಲಕ್ಕಾಗಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
182 ಸ್ಥಾನಗಳ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆದರೆ ಕಾಂಗ್ರೆಸ್ 10ಕ್ಕಿಂತ ಹೆಚ್ಚು ಸ್ಥಾನ ಪಡೆಯುವುದಿಲ್ಲ ಎಂದು ಹೇಳಿದರು. ಗೆದ್ದವರು ಕೂಡ ಬಿಜೆಪಿ ಸೇರಲಿದ್ದಾರೆ ಎಂದರು. ಕಾಂಗ್ರೆಸ್‌ಗೆ ಮತ ಹಾಕುವುದು ವ್ಯರ್ಥ ಎಂದರು.
Gujarat elections: Gujarat Assembly elections: AAP government is coming: Kejriwal