ಕಲುಷಿತ ನೀರು ಸೇವೆನೆ – 6 ಮಂದಿ ಬಲಿ , 50 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ
ಗುಜರಾತ್ : ಕಲುಷಿತ ನೀರನ್ನು ಸೇವನೆಯಿಂದಾಗಿ 6 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿರುವ ಕ್ಯಾಥೋರ್ ಗ್ರಾಮದಲ್ಲಿ ನಡೆದಿದೆ. ಮೇ 30 ಮತ್ತು ಮೇ 31ರ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಈ ಮುನ್ನ ಸೂರತ್ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ವಿವೇಕ್ ನಗರದ ಕಾಲೋನಿಗೆ ಭೇಟಿ ನೀಡಿ ಗ್ರಾಮಸ್ಥರಿಗೆ ಕ್ಲೋರಿನ್ ಮೆಡಿಸಿನ್ ವಿತರಿಸಿದ್ದರು.
ಗ್ರಾಮಸ್ಥರು ಕಲುಷಿತ ನೀರನ್ನು ಸೇವಿಸಿದ್ದರಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅಲ್ಲದೆ ಕುಡಿಯುವ ನೀರಿನ ಪೈಪ್ಲೈನ್ನಲ್ಲಿ ಸೋರಿಕೆ ಕಂಡುಬಂದಿದ್ದು, ಒಳಚರಂಡಿ ನೀರಿನೊಂದಿಗೆ ಬೆರೆತು ನೀರು ಕಲುಷಿತಗೊಂಡಿದೆ ಎನ್ನಲಾಗಿದೆ. ಸೂರತ್ ಮೇಯರ್ ಹೇಮಾಲಿ ವೋಘವಾಲಾರವರು ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.