ಗುಜರಾತ್ ನಲ್ಲಿ ಕಮಲ ಕಿಲಕಿಲ.. ಗೆಲುವಿನತ್ತ ಕೇಸರಿ ಪಡೆ
ಗಾಂಧಿನಗರ : ಗುಜರಾತ್ ನ ಎಂಟು ಕ್ಷೇತ್ರಗಳಿಗೆ ನಡೆದ ಉಪಚುನವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನತ್ತ ದಾಪುಗಾಲು ಹಾಕುತ್ತಿದೆ. ಎಂಟಕ್ಕೆ ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಗುಜರಾತ್ ನ ಅಬ್ದಾಸ್, ಕರ್ಜನ್, ಮೊರ್ಬಿ, ಗಡಾಡಾ, ಧಾರಿ, ಲಿಂಬ್ಡಿ, ಕಪ್ರದಾ ಮತ್ತು ಡಂಗ್ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು ಒಟ್ಟು 81 ಅಭ್ಯರ್ಥಿಗಳು ಕಣದಲ್ಲಿದ್ದರು.
ಸದ್ಯದ ಮಾಹಿತಿ ಪ್ರಕಾರ ಎಂಟೂ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ದಾಪುಗಾಲು ಹಾಕಿದ್ದಾರೆ.
ಕಾಂಗ್ರೆಸ್ ನದ್ದು ಮನೆಯೊಂದು ಮೂರು ಬಾಗಿಲು ಪರಿಸ್ಥಿತಿ : ಆರ್.ಅಶೋಕ್
ಇನ್ನು ಕೇಂದ್ರ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಬೆಳಗ್ಗೆ 11ಗಂಟೆಯವರೆಗೆ ಬಿಜೆಪಿ ಶೆ.53.50ರಷ್ಟು ಮತ ಪಡೆದುಕೊಂಡಿದೆ. ಕಾಂಗ್ರೆಸ್ ಶೇ.35 ವೋಟ್ ಪಡೆದುಕೊಂಡಿದೆ.
ಇಂದು ಮುಂಜಾನೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಬಿಜೆಪಿ ಎಲ್ಲ ಕ್ಷೇತ್ರಗಳಲ್ಲೂ ಮುನ್ನಡೆ ಪಡೆದುಕೊಳ್ಳುತ್ತಿದ್ದಂತೆ ಗಾಂಧಿನಗರದಲ್ಲಿರುವ ಭಾರತೀಯ ಜನತಾ ಪಾರ್ಟಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ಆರಂಭಗೊಂಡಿದೆ.
ಬಿಜೆಪಿ ಕಾರ್ಯಕರ್ತರು ಪಾರ್ಟಿ ಆಫೀಸ್ ಬಳಿ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel