Gujarath : ಮಗಳ ಅಶ್ಲೀಲ ವಿಡಿಯೋ ಪೋಸ್ಟ್ – ಪ್ರಶ್ನೆ ಮಾಡಿದ ಯೋಧನ ಕೊಲೆ
ಮಗಳ ಅಶ್ಲೀಲ ವಿಡಿಯೋ ಪೋಸ್ಟ್ ಮಾಡಿದ್ದನ್ನ ಪ್ರಶ್ನಿಸಿದ್ದಕ್ಕೆ ಯೋಧನನ್ನ ಕೊಲೆ ಮಾಡಿರುವ ಆಘಾತಕಾರಿ ಘಟನೆ ಗುಜರಾತ್ ನ ನಾಡಿಯಾಡ್ ನಲ್ಲಿ ಬೆಳಕಿಗೆ ಬಂದಿದೆ..
ಚಕ್ಲಾಸಿ ಗ್ರಾಮದಲ್ಲಿ 15 ವರ್ಷದ ಹುಡುಗ ಬಾಲಕಿಯ ( ಮೃತ ಯೋಧನ ಮಗಳು ) ಅಶ್ಲೀಲ ವೀಡಿಯೋವನ್ನು ಆನ್‌ಲೈನ್ ನಲ್ಲಿ ಪೋಸ್ಟ್ ಮಾಡಿದ್ದ. ಇದಕ್ಕೆ ಬಾಲಕಿಯ ತಂದೆ ಯೋಧ ಮೆಲ್ಜಿಭಾಯಿ ವಘೇಲಾ ಅವರು ಬಾಲಕನ ಮನೆಗೆ ತೆರಳಿ ಹುಡುಗನ ನಡೆಯನ್ನು ಖಂಡಿಸಿದ್ದಾರೆ. ಈ ವೇಳೆ ಹುಡುಗನ ಮನೆಯವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಮೂಲಗಳ ಪ್ರಕಾರ ಹುಡುಗ ಹಾಗೂ ಬಾಲಕಿ ಒಂದೇ ಶಾಲೆಯಲ್ಲಿ ಓದುತ್ತಿದ್ದು, ಇಬ್ಬರೂ ಸಂಬಂಧವನ್ನು ಹೊಂದಿದ್ದರು ಎನ್ನಲಾಗಿದೆ.
ತನ್ನ ಮಗಳ ಅಶ್ಲೀಲ ವೀಡಿಯೋವನ್ನು ಪೋಸ್ಟ್ ಮಾಡಿದ್ದಕ್ಕೆ ಬಿಎಸ್‌ಎಫ್ ಯೋಧರು ತನ್ನ ಕುಟುಂಬದೊಂದಿಗೆ ಹುಡುಗನ ಮನೆಗೆ ಮಾತನಾಡಲು ತೆರಳಿದ್ದರು ಎಂದು ತಿಳಿದುಬಂದಿದೆ.
ರಾತ್ರಿ ಯೋಧ ತನ್ನ ಪತ್ನಿ, ಇಬ್ಬರು ಪುತ್ರರು ಹಾಗೂ ಸೋದರಳಿಯನೊಂದಿಗೆ ಯುವಕನ ಮನೆಗೆ ತೆರಳಿದ್ದರು. ಆದರೆ ಹುಡುಗನ ಕುಟುಂಬದವರು ಅವರನ್ನು ನಿಂದಿಸಿದ್ದಾರೆ.. ನಂತರ ಹುಡುಗನ ಮನೆಯವರು ಯೋಧನ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾದ ಯೋಧ ಮೃತಪಟ್ಟಿದ್ದಾರೆ… ಘಟನೆಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ.