ಗುಜರಿ ಗೋದಾಮಿಗೆ ಬೆಂಕಿ ತಗುಲಿದ ಪರಿಣಾಮ ಗೋದಾಮಿನಲ್ಲಿದ್ದ ವಸ್ತುಗಳು ಹಾಗೂ ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ದೊಡ್ಡಬಳ್ಳಾಪುರದ ಕುಂಬಾರಪೇಟೆಯಲ್ಲಿನ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ಅಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿವೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.