ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಓರ್ವ ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ಭೀಕರ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಓರ್ವ ಯೋಧ ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.
ಅನಂತ್‌ನಾಗ್ ಜಿಲ್ಲೆಯ ಅಹ್ಲಾನ್ ಗಡೋಲ್‌ನಲ್ಲಿ ಎನ್‌ಕೌಂಟರ್ ಆರಂಭವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕೋಕರ್ನಾಗ್ ಉಪವಿಭಾಗದ ಅರಣ್ಯದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರ ಗುಂಪು ಸೇನೆಯ ಮೇಲೆ ದಾಳಿ ನಡೆಸಿದೆ. ಹೀಗಾಗಿ ಯೋಧರು ಪ್ರತಿ ದಾಳಿ ನಡೆಸಿದ್ದಾರೆ. ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.