ಮಣಿಪುರ: ಮಣಿಪುರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ.
ಬೂದಿ ಮುಚ್ಚಿದ ಕೆಂಡದಂತಿದ್ದ ಅಲ್ಲಿ ಸೇನಾಪಡೆ ಹಾಗೂ ದಂಗೆಕೋರರ ಮಧ್ಯೆ ಸಂಘರ್ಷ ನಡೆದಿದೆ. ಭಾರತ-ಮ್ಯಾನ್ಮಾರ್ ಗಡಿಯಲ್ಲಿನ ಮಣಿಪುರದ ಮೊರೆಹ್ ಪಟ್ಟಣದಲ್ಲಿ ಭಾನುವಾರ ರಾತ್ರಿ ಭದ್ರತಾ ಪಡೆ ಹಾಗೂ ಬಂಡುಕೋರರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಹಿಲ್ಸ್ ಮೂಲದ ದಂಗೆಕೋರರು ರಾಜ್ಯ ಪೊಲೀಸ್ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಪ್ರತೀಕಾರವಾಗಿ ಸೇನಾಪಡೆ ದಾಳಿ ನಡೆಸಿದೆ. ಹೀಗಾಗಿ ಕೆಲವು ಹೊತ್ತು ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಟೆಂಗ್ನೌಪಾಲ್ ಜಿಲ್ಲೆಯಲ್ಲಿ ಈ ಹಿಂದೆ ಕೂಡ ಗುಂಡಿನ ಚಕಮಕಿ ನಡೆದಿತ್ತು. ಆ ವೇಳೆ 6 ಜನ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.








