ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬೆಳಿಗ್ಗೆ 5 ಗಂಟೆ ವೇಳೆಗೆ ಬಾಂದ್ರಾದಲ್ಲಿನ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಆನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇತ್ತೀಚೆಗಷ್ಟೇ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್, ಸಲ್ಮಾನ್ ಖಾನ್ ಹತ್ಯೆ ಮಾಡುವುದಾಗಿ ಹೇಳಿದ್ದ. ತಾನು ಟಾರ್ಗೆಟ್ ಮಾಡಿರುವ 10 ಜನರ ಹೆಸರಿನ ಪಟ್ಟಿಯಲ್ಲಿ ಸಲ್ಮಾನ್ ಖಾನ್ ಮೊದಲಿಗರಾಗಿದ್ದಾರೆ ಎಂದಿದ್ದ. 1998 ರ ಕೃಷ್ಣಮೃಗ ಬೇಟೆ ಆರೋಪ ಹೊತ್ತಿರುವ ಬಾಲಿವುಡ್ ನಟನ ಮೇಲೆ ಬಿಷ್ಣೋಯ್ ದ್ವೇಷ ಕಾರುತ್ತಿದ್ದ ಎನ್ನಲಾಗಿದೆ.
ಬಿಷ್ಣೋಯ್ ತನ್ನ ಸಹಾಯಕ ಸಂಪತ್ ನೆಹ್ರಾ ಬಳಸಿಕೊಂಡು ಸಲ್ಮಾನ್ ಖಾನ್ ಮೇಲೆ ಕಣ್ಣಿಟ್ಟಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸಲ್ಮಾನ್ ಖಾನ್ ಭದ್ರತೆಯನ್ನು Y+ ಗೆ ಹೆಚ್ಚಿಸಿದ್ದಾರೆ.