‘ಪುರುಷೋತ್ತಮ’ ದಲ್ಲಿ ನಾಯಕನಾಗಿ ಮಿಂಚಲಿದ್ದಾರೆ ಜಿಮ್ ರವಿ..!
ಅಂತಾರಾಷ್ಟ್ರೀಯ ಬಾಡಿ ಬಿಲ್ಡರ್ ಹಾಗೂ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಪೋಷಕ ಪಾತ್ರಗಳಲ್ಲಿ ನಟಿಸುತ್ತಾ ಬಂದಿರುವ ಜಿಮ್ ರವಿ ಈಗ ನಾಯಕನಟನಾಗಿ ಪರಿಚಯ ಆಗ್ತಿದ್ದಾರೆ. ಕನ್ನಡ ಇಂಡಸ್ಟ್ರಿಯಲ್ಲಿ ಸುಮಾರು 130ಕ್ಕೂ ಅಧಿಕ ಚಿತ್ರಗಳಲ್ಲಿ ಜಿಮ್ ರವಿ ಪೋಷಕ ಪಾತ್ರ ನಿರ್ವಹಿಸಿದ್ದಾರೆ. ಬಹಳ ವರ್ಷದ ಬಳಿಕ ಸ್ಯಾಂಡಲ್‌ವುಡ್‌ನಲ್ಲಿ ಜಿಮ್ ರವಿ ಹೀರೋ ಆಗಿ ಪ್ರಮೋಟ್ ಆಗಿದ್ದಾರೆ. ಸ್ವತಃ ಜಿಮ್ ರವಿ ಅವರೇ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ಸಿನಿಮಾಗೆ ಪುರುಷೋತ್ತಮ ಎಂದು ಹೆಸರಿಡಲಾಗಿದೆ.
ಉತ್ತರಕಾಂಡ್ ನಲ್ಲಿ ಹಿಮಕುಸಿತ : ದುರಂತಕ್ಕೆ ವಿಕಿರಣ ಕಾರಣ..? ಸ್ಥಳೀಯರ ಶಂಕೆ
ಹೌದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಬಾಡಿಬಿಲ್ಡರ್ ಜಿಮ್ ರವಿ ಅವರು ಈಗ ನಾಯಕನಟರಾಗಿ ಮಿಂಚಲು ಮುಂದಾಗಿದ್ದಾರೆ. ಈಗಾಗಲೇ ಜಿಮ್ ರವಿ ಅವರು ರಾಜ್ಯ, ರಾಷ್ಟ್ರ , ಅಂತ ರಾಷ್ಟ್ರಮಟ್ಟದಲ್ಲೂ ಬಾಡಿ ಬಿಲ್ಡಿಂಗ್‍ನಲ್ಲಿ ಹೆಸರು ಮಾಡಿದ್ದಾರೆ. ಅಲ್ಲದೆ, ಕಿರುತೆರೆ, ಹಿರಿತೆರೆಯಲ್ಲೂ ನಟಿಸಿದ್ದಾರೆ. ಕಳೆದ ಬಾರಿ ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ಅವರು ಮಿಂಚಿದ್ದರು. ಇದೀಗ ಚಲನಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ಅಭಿಮಾನಿಗಳ ಮನಗೆಲ್ಲಲು ಸಿದ್ಧರಾಗಿದ್ದಾರೆ.
ಅವರು ಕಳೆದ ಎರಡೂವರೆ ದಶಕಗಳಿಂದ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ 130ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿರುವ ರವಿ, ಇದೀಗ ಪುರುಷೋತ್ತಮ ಎಂಬ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದಲ್ಲದೆ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ದಿಲ್‍ದಾರ್, ನಾನು ನಮ್ ಹುಡುಗಿ, ಖರ್ಚಿಗ್ ಒಂದು ಮಾಫಿಯಾ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಅಮರನಾಥ್ ಅವರು ಚಿತ್ರಕಥೆ ಸಂಭಾಷಣೆ ಬರೆದಿದ್ದು ಆಕ್ಷನ್ ಕಟ್ ಹೇಳಿದ್ದಾರೆ. ಸದ್ಯದಲ್ಲೇ ಪುರುಷೋತ್ತಮ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಚಿತ್ರದ ಚಿತ್ರೀಕರಣವನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ಮಾಡಲು ಚಿತ್ರತಂಡ ಉತ್ಸುಕವಾಗಿದೆ. ಈ ಚಿತ್ರಕ್ಕೆ ಶ್ರೀಧರ್ ಸಂಭ್ರಮ್ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಕುಮಾರ್ ಎಂ ಛಾಯಾಗ್ರಹಣ ಇರಲಿದೆ.
ಉತ್ತರಕಾಂಡ್ ನಲ್ಲಿ ಹಿಮಕುಸಿತ : ಬೇಸರ ವ್ಯಕ್ತಪಡಿಸಿದ ಅಮೆರಿಕಾ..!
ಇನ್ನೂ ರವಿ ಅವರು ದೇಹದಾರ್ಢ್ಯ ವಿಭಾಗದಲ್ಲಿ 15 ಬಾರಿ ಭಾರತ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ್ದಾರೆ. 4 ಬಾರಿ ಭಾರತ ತಂಡದ ನಾಯಕನಾಗಿ, ಎರಡು ಬಾರಿ ಭಾರತ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಇಂಡೋ-ಪಾಕಿಸ್ತಾನ್ ಸ್ಪರ್ಧೆಯಲ್ಲಿ ಮೊದಲ ಸ್ಥಾನ – ಗೋಲ್ಡ್ ಮೆಡಲ್ ಪಡೆದಿದ್ದಾರೆ. ರಾಜ್ಯ ಸರ್ಕಾರದಿಂದ ಏಕಲವ್ಯ ಪ್ರಶಸ್ತಿ ಪಡೆದಿರುವ ಎ.ವಿ.ರವಿ ಅನೇಕ ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಭಾರತ ಶ್ರೀ, ಭಾರತ ಶ್ರೇಷ್ಠ, ಕರ್ನಾಟಕ ಶ್ರೀ, ಕರ್ನಾಟಕ ಶ್ರೇಷ್ಠ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಹಾಗೂ 90ಕ್ಕೂ ಹೆಚ್ಚು ಚಿನ್ನದ ಪದಕಗಳನ್ನ ಜಿಮ್ ರವಿ ಅವರು ಪಡೆದಿದ್ದಾರೆ.
ಉತ್ತರಕಾಂಡ್ ನಲ್ಲಿ ಹಿಮಕುಸಿತ: 32 ಮೃತದೇಹ ಪತ್ತೆ, 206 ಮಂದಿ ನಾಪತ್ತೆ..!
ಉತ್ತರರಾಂಡ್ ನಲ್ಲಿ ಹಿಮಕುಸಿತ : ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಸಿಬ್ಬಂದಿಗಳಿಂದ ಹರಸಾಹಸ..!
ಎಲ್‌ಪಿಜಿ ಸಿಲಿಂಡರ್ ಗೊಡೌನ್‌ನಲ್ಲಿ ಸ್ಪೋಟ – 4 ಮಂದಿಗೆ ಗಾಯ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel