ಜಲ ವಿವಾದ ಬಗೆಹರಿಸಲು `ದಳಪತಿ ಪಾದಯಾತ್ರೆ’
ಬೆಂಗಳೂರು : ರಾಜ್ಯದ ಜಲ ವಿವಾದಗಳನ್ನು ಬಗೆಹರಿಸಲು ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಾದಯಾತ್ರೆ ನಡೆಸಲಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ.
ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಲ ವಿವಾದಗಳನ್ನು ಬಗೆಹರಿಸಲು ಜೆಡಿಎಸ್ ಪಕ್ಷ ಹೋರಾಟ ನಡೆಸಲಿದೆ.
ಕುಮಾರಸ್ವಾಮಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುವುದು. ಮಹದಾಯಿ, ಆಲಮಟ್ಟಿ, ಮೇಕೆದಾಟು ಯೋಜನೆ ಪರವಾಗಿ ಹೋರಾಟ ನಡೆಸಲಾಗುತ್ತದೆ.
ಕಾಂಗ್ರೆಸ್ ಮತ್ತು ಬಿಜೆಪಿಗೆ ಹೋರಾಟ ನಡೆಸಲು ಸಮಸ್ಯೆ ಇದೆ. ಪ್ರಾದೇಶಿಕ ಪಕ್ಷವಾಗಿ ಸಮಸ್ಯೆ ಬಗೆಹರಿಸಬೇಕು.
ಹೋರಾಟ ಮಾಡಿ ಅಧಿಕಾರಕ್ಕೆ ಬರುತ್ತೇವೆ ಎಂದು ಕುಮಾರಸ್ವಾಮಿ ತೀರ್ಮಾನ ಮಾಡಿದ್ದಾರೆ. ನಾನು ಹೋರಾಟದಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ನೆಹರು ಮತ್ತು ವಾಜಪೇಯಿ ಅವರ ಹೆಸರಲ್ಲಿ ಕಾಂಗ್ರೆಸ್ – ಬಿಜೆಪಿ ನಾಯಕರ ಹೇಳಿಕೆಗಳ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ ಹೆಚ್ ಡಿಡಿ, ಹಿರಿಯರ ಬಗ್ಗೆ ಹಾಗೆಲ್ಲ ಮಾತನಾಡಬಾರದು. ಇಂತಹ ಮಾತುಗಳಿಂದ ಪಕ್ಷದ ಇಮೇಜ್ ಬಿಲ್ಡ್ ಆಗುವುದಿಲ್ಲ ಎಂದು ಸಲಹೆ ನೀಡಿದ್ದಾರೆ.