ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಅವರ ಬೆಂಬಲ ಇದೆ ಎಂಬ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಅವರ ಹೇಳಿಕೆಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು, ಸಿ.ಪಿ. ಯೋಗೇಶ್ವರ್ ಮಾಡಿರುವ ಆರೋಪಕ್ಕೆ ಸಾಕ್ಷ್ಯ ಇದೆಯೇ..? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಕುಮಾರಸ್ವಾಮಿ ಹಿಂದೆ ಒಮ್ಮೆ, ನನ್ನ ಅನುಮತಿ ಇಲ್ಲದೇ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಿದ್ದರು. ಅದನ್ನು ಈಗ ನೆನಪಿಸಲ್ಲ. ಕುಮಾರಸ್ವಾಮಿಗೆ ಕದ್ದು ಹೋಗಬೇಕಾದ ಅಗತ್ಯ ಇಲ್ಲ ಎಂದು ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇದೇ ನಾಲ್ಕರಂದು ಜೆಡಿಎಸ್ ಮುಖಂಡರ ಸಭೆ ನಡೆಸುತ್ತೇವೆ. ರಾಜ್ಯದಲ್ಲಿ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ 200ಕ್ಕಿಂತ ಹೆಚ್ಚು ಜನರು ಭಾಗವಹಿಸಲು ಅವಕಾಶ ಇಲ್ಲ. ಆದ್ದರಿಂದ ಈ ಸಭೆಗೆ ಶಾಸಕರು, ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಉಮೇದುವಾರರು, ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ ಹೆಚ್ ಡಿಡಿ.