ಇಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಅವರ ಜನ್ಮದಿನವಾದ ಹಿನ್ನೆಲೆ ಅನೇಕ ಗಣ್ಯರು, ಹಿರಿಯ ರಾಜಕೀಯ ಮುಖಂಡರು ಶ್ರೀಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯಗಳನ್ನು ಕೋರುತ್ತಿದ್ದಾರೆ. ಅದರಂತೆ ಮಾಜಿ ಪ್ರಧಾನಮಂತ್ರಿಗಳಾದ ಹೆಚ್ ಡಿ ದೇವೇಗೌಡರು ಸಹ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. 
“ಶ್ರೀ ಆದಿಚುಂಚಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಧೀರ್ಘಾಯುಷ್ಯ, ಉತ್ತಮ ಆರೋಗ್ಯ ನೀಡಲಿ ಹಾಗೂ ನಾಡಿಗೆ ತಮ್ಮ ಮಾರ್ಗದರ್ಶನ, ಆಶೀರ್ವಾದ ನಿರಂತರವಾಗಿರಲಿ ಎಂದು ಕಾಲಭೈರವೇಶ್ವರನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








