ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು : ಹೆಚ್ ಡಿಕೆ

Mahesh M Dhandu by Mahesh M Dhandu
May 10, 2021
in Newsbeat, Politics, ರಾಜಕೀಯ
Agahanashini River H D Kumaraswamy tweet saaksha tv
Share on FacebookShare on TwitterShare on WhatsappShare on Telegram

ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು : ಹೆಚ್ ಡಿಕೆ

ಬೆಂಗಳೂರು : ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

ಇಂದಿನಿಂದ ರಾಜ್ಯದಲ್ಲಿ ಜಾರಿಯಾಗಿರುವ ಲಾಕ್ ಡೌನ್ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು.

ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್ ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ.

H D kumaramaswamy

ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್ ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್ ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ.

ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ.

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು, ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು ಎಂದು ಬರೆದುಕೊಂಡಿದ್ದಾರೆ.

corona cases

Tags: bangaloreH D kumaramaswamyLock Down
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram