H D Kumaraswamy | ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರಕಾರ
ಬೆಂಗಳೂರು : ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರಕಾರದ ಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾದಿಸಿದ್ದಾರೆ.
ಮುಂದಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಹೆಚ್ ಡಿ ಕುಮಾರಸ್ವಾಮಿ, ಕೆ.ಚಂದ್ರಶೇಖರ್ ರಾವ್ ಅವರ ಬಿಆರ್ ಎಸ್ ಪಕ್ಷದ ಜೊತೆ ಕೈ ಜೋಡಿಸಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಕುಮಾರಸ್ವಾಮಿ, 2023ರ ಕರ್ನಾಟಕ ಚುನಾವಣೆ, 2024ರ ಲೋಕಸಭೆ ಚುನಾವಣೆಯಲ್ಲಿ ಜನತಾ ದಳ & ಬಿಆರ್ ಎಸ್ ಒಟ್ಟಾಗಿ ಕೆಲಸ ಮಾಡಲಿವೆ. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರದಲ್ಲಿ ʼಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯʼ ಸ್ಥಿತಿ ಇದೆ. ಅದೇ ಸ್ಥಿತಿಯನ್ನು ರಾಜ್ಯದಲ್ಲೂ ತರಲು ನಾನು, ಶ್ರೀ ಕೆಸಿಆರ್ ನಿರ್ಧಾರ ಮಾಡಿದ್ದೇವೆ.

2023ರ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳ ಹೊರತಾದ ಸ್ವತಂತ್ರ ಸರಕಾರ ತರಲು ಎರಡೂ ಪಕ್ಷಗಳು ಸದೃಢವಾಗಿ ಕೆಲಸ ಮಾಡಲಿವೆ. ನಮಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಶ್ರೀ ಕೆಸಿಆರ್ ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರಕಾರದ ಬೇಕು. ಈ ನಿಟ್ಟಿನಲ್ಲಿ ನಾವಿಬ್ಬರೂ ಚರ್ಚಿಸಿದ್ದೇವೆ.
2023ರ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳ ಹೊರತಾದ ಸ್ವತಂತ್ರ ಸರಕಾರ ತರಲು ಎರಡೂ ಪಕ್ಷಗಳು ಸದೃಢವಾಗಿ ಕೆಲಸ ಮಾಡಲಿವೆ. ನಮಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಶ್ರೀ ಕೆಸಿಆರ್ ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರಕಾರದ ಬೇಕು. ಈ ನಿಟ್ಟಿನಲ್ಲಿ ನಾವಿಬ್ಬರೂ ಚರ್ಚಿಸಿದ್ದೇವೆ. 2/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 5, 2022
ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿತ್ತು. ಕೆಲ ಪಕ್ಷಗಳ ʼರಾಜಕೀಯ ಏಕಸ್ವಾಮ್ಯತೆʼ ದೇಶಕ್ಕೆ ಮಾರಕ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು. ಬಿಆರ್ ಎಸ್ ಒಂದು ʼಪ್ರಬಲ ಪರ್ಯಾಯʼ ಎನ್ನುವುದು ನನ್ನ ಭಾವನೆ. ಬಿಆರ್ ಎಸ್ ಸ್ಥಾಪನೆಯನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ.
ಬಿಆರ್ ಎಸ್ ಸ್ಥಾಪನೆ ಬಗ್ಗೆ ಜನತಾ ದಳ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಿಗಳಾದ ಶ್ರೀ ಹೆಚ್ ಡಿ ದೇವೇಗೌಡ ಅವರು, ನನ್ನ ಜತೆ ಶ್ರೀ ಕೆಸಿಆರ್ ಸಮಾಲೋಚಿಸಿದ್ದರು. ಕೆಲ ದಿನಗಳ ಹಿಂದೆ ಸ್ವತಃ ನಾನೇ ಹೈದರಾಬಾದ್ʼಗೆ ತೆರಳಿ ಚರ್ಚಿಸಿದ್ದೆ. ನಮ್ಮನ್ನು ಪರಿಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಅವರು ಈ ದಿಟ್ಟಹೆಜ್ಜೆ ಇರಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.