ಬಿಜೆಪಿ ಸರ್ಕಾರ ಸಾಲಮನ್ನಾ ಹಣ ಬಿಡುಗಡೆ ಮಾಡಿಲ್ಲ : ಹೆಚ್ ಡಿಕೆ ( H D Kumaraswamy )
ತುಮಕೂರು : ನಾನು ಅಧಿಕಾರದಲ್ಲಿದ್ದಾಗ ಇಪ್ಪತ್ತೈದು ಸಾವಿರ ಕೋಟಿ ಸಾಲಮನ್ನಾ ಮಾಡಿದ್ದೆ. ಆದ್ರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಲಮನ್ನಾ ಹಣ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ( H D Kumaraswamy ) ಆರೋಪಿಸಿದ್ದಾರೆ. ಶಿರಾ ಉಪಚುನಾವಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( H D Kumaraswamy ) ಅವರು ಇಂದು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರ ಪರ ಪ್ರಚಾರ ಮಾಡಿದರು. ಕ್ಷೇತ್ರದ ಕಳ್ಳಂಬೆಳ್ಳ ಹೋಬಳಿಯ ಹಾಲೇನಹಳ್ಳಿ, ಬಾಲೇನಹಳ್ಳಿ, ತರೂರು, ಭೂಪಸಂದ್ರ, ದೊಡ್ಡ ಆಲದಮರ ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ಸಾಲಮನ್ನಾ ಮಾಡಿದ್ದೆ. ಆಗ ಸಿರಾ ತಾಲೂಕಿನ ಒಂದರಲ್ಲಿ ಹದಿನೇಳು ಸಾವಿರ ರೈತರು ಸಾಲಮನ್ನಾ ಪ್ರಯೋಜನ ಪಡೆದಿದ್ದಾರೆ. ಆದ್ರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಲಮನ್ನಾ ಹಣ ಬಿಡುಗಡೆ ಮಾಡಿಲ್ಲ. 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಮೊದಲೂರು ಕೆರೆಗೆ ನೀರು ಹರಿಸಲು 600 ಕೋಟಿ ಬಿಡುಗಡೆ ಮಾಡಿದ್ದೆ. ಈಗ ಬಿಜೆಪಿಯವರು ಮೊದಲೂರು ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ದರ್ಶನ್ ರೋಡ್ ಶೋನಲ್ಲಿ ನಟಿ ಅಮೂಲ್ಯ ಭಾಗಿ
ಇನ್ನು ಸತ್ಯಣ್ಣ ಶಾಸಕರಾದ ಮೇಲೆ ಸುಮಾರು ಹದಿನೇಳು ಸಾವಿರ ರೈತರಿಗೆ ಬಗರ್ ಹುಕುಂ ಜಮೀನು ಮಂಜೂರು ಪತ್ರ ನೀಡಿದರು. ಬಿಜೆಪಿ ಅಧಿಕಾರ ನಡೆಸುತ್ತಿದೆ, ಉತ್ತರ ಕರ್ನಾಟಕದಲ್ಲಿ ನೆರೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದ್ರೆ ಅವರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಕುಮಾರಸ್ವಾಮಿ ಆರೋಪಿಸಿದರು.
ಬಿಜೆಪಿಗೆ ತಕ್ಕ ಪಾಠ
ಬಳಿಕ ಪ್ರಚಾರವನ್ನುದ್ದೇಶಿ ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿ, ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್ ಅನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಪಕ್ಷಕ್ಕೆ ನಿಷ್ಠರಾಗಿದ್ದ ಸತ್ಯಣ್ಣ ಅವರ ನೈತಿಕತೆಯನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.
ನಮ್ಮ ಪಕ್ಷದಲ್ಲಿ ಅಧಿಕಾರ ಅನುಭವಿಸಿದ ಹಲವರು ನಮ್ಮನ್ನು ಬಿಟ್ಟು ಹೋಗಿದ್ದಾರೆ. ಯಾರೇ ಹೋದರು ಪಕ್ಷದಲ್ಲಿ ಬಲಿಷ್ಠ ಕಾರ್ಯಕರ್ತರ ಪಡೆ ಇದೆ, ಅಮ್ಮಾಜಮ್ಮ ಅವರನ್ನು ಗೆಲ್ಲಿಸುವ ಮೂಲಕ ಶಿರಾ ಜೆಡಿಎಸ್ ಭದ್ರಕೋಟೆ ಎನ್ನುವುದನ್ನು ನಿರೂಪಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.
ರಾಜ್ಯ ಇತಿಹಾಸದಲ್ಲಿ ಶಿರಾ ಉಪ ಚುನಾವಣೆ ಮೈಲಿಗಲ್ಲು ಆಗಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟ ಗೌರಿಶಂಕರ್, ಕೆ.ಆರ್.ಪೇಟೆ ಮಾದರಿಯಲ್ಲಿ ಹಣ ಹಂಚಿ ಚುನಾವಣೆ ಗೆಲ್ಲಲ್ಲು ಬಂದಿರುವ ಬಿಜೆಪಿಗೆ ಶಿರಾದ ಸ್ವಾಭಿಮಾನಿ ಮತದಾರರು ತಕ್ಕ ಪಾಠವನ್ನು ಕಲಿಸಬೇಕಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ಮತಕ್ಕಾಗಿ `ಗಜ’ ಸಂಚಾರ : ಸಾಮಾಜಿಕ ಅಂತರ ಎಲ್ಲಿ ‘ಸ್ವಾಮಿ’..?
ಅಮ್ಮಾಜಮ್ಮ ಅವರಿಗೆ ಮತ ನೀಡುವ ಮೂಲಕ ಅವರ ಗೆಲ್ಲಿಸುವ ಉತ್ಸಾಹವನ್ನು ಯುವಕರು, ಮಹಿಳೆಯರು ಕಳೆದುಕೊಳ್ಳಬಾರದು ಎಂದು ಮನವಿ ಮಾಡಿದರು.
ಈ ವೇಳೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ, ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ, ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel