ದೇಗುಲಗಳ ಧ್ವಂಸಕ್ಕೆ ಬಿಜೆಪಿ ಸರ್ಕಾರದ ದ್ವಂದ್ವ ನೀತಿಯೇ ಕಾರಣ : ಹೆಚ್ ಡಿಕೆ

1 min read
H D Kumaraswamy saaksha tv

ದೇಗುಲಗಳ ಧ್ವಂಸಕ್ಕೆ ಬಿಜೆಪಿ ಸರ್ಕಾರದ ದ್ವಂದ್ವ ನೀತಿಯೇ ಕಾರಣ : ಹೆಚ್ ಡಿಕೆ

ಬೆಂಗಳೂರು : ಮೈಸೂರು ಜಿಲ್ಲೆಯ 93 ದೇವಾಲಯಗಳ ಧ್ವಂಸಕ್ಕೆ ರಾಜ್ಯ ಬಿಜೆಪಿ ಸರ್ಕಾರದ ದ್ವಂದ್ವ ನೀತಿಯೇ ಕಾರಣ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ದೇವಾಲಯ ತೆರವಿನ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ನಲ್ಲಿ..
ಸುಪ್ರೀಂ ಕೋರ್ಟ್ ಆದೇಶದ ನೆಪದಲ್ಲಿ ಮೈಸೂರು ಜಿಲ್ಲೆಯ 93 ದೇವಾಲಯಗಳ ಧ್ವಂಸಕ್ಕೆ ರಾಜ್ಯ ಬಿಜೆಪಿ ಸರ್ಕಾರದ ದ್ವಂದ್ವ ನೀತಿಯೇ ಕಾರಣ. ಒಂದು ಸರ್ಕಾರಕ್ಕಿಂತ ಜಿಲ್ಲಾಡಳಿತ ದೊಡ್ಡದೇ? ಒಂದೆಡೆ ದೇಗುಲಗಳ ಧ್ವಂಸ ನಡೆಯುತ್ತಿದೆ. ಇನ್ನೊಂದೆಡೆ ಆಡಳಿತ ಪಕ್ಷದ ಮಿತ್ರಸಂಘಟನೆ ಹಿಂದೂ ಜಾಗರಣ ವೇದಿಕೆ ಹಾದಿಬೀದಿಯಲ್ಲಿ ಪ್ರತಿಭಟನೆ ಮಾಡುತ್ತಿದೆ!

H D Kumaraswamy saaksha tv

ಇದರ ಅರ್ಥವೇನು? ದೇಗುಲಗಳ ಧ್ವಂಸ ಮತ್ತು ಪ್ರತಿಭಟನೆ ಹಿಂದೆ ಬಿಜೆಪಿ ಇದೆ ಎಂಬ ಅನುಮಾನ ಕಾಡುತ್ತಿದೆ. ಸರಕಾರ ಮನಸ್ಸು ಮಾಡಿದರೆ ತಕ್ಷಣವೇ ದೇಗುಲಗಳ ನೆಲಸಮ ನಿಲ್ಲಿಸಬಹುದು. ಸರಕಾರ ಅದನ್ನು ಮಾಡುತ್ತಿಲ್ಲ. ಹಿಂದುಗಳ ರಕ್ಷಣೆಯ ಪೇಟೆಂಟ್ ಪಡೆದು ರಾಜಕಾರಣ ಮಾಡುವ ಭಾರತೀಯ ಜನತಾ ಪಕ್ಷದ ಸರಕಾರವೇ ರಾಜ್ಯದಲ್ಲಿದೆ.

ಹಾಗಾದರೆ, ದೇವಾಲಯಗಳನ್ನೇಕೆ ನೆಲಸಮ ಮಾಡಲಾಗುತ್ತಿದೆ? ಸರಕಾರವೇ ಇದಕ್ಕೆ ಉತ್ತರ ನೀಡಬೇಕು. ಸರಕಾರಕ್ಕೆ ನಿಜಕ್ಕೂ ದೇಗುಲ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಸುಪ್ರೀಂ ಕೊರ್ಟ್’ಗೆ ಮೇಲ್ಮನವಿ ಸಲ್ಲಿಸಲಿ. ಎಲ್ಲ ಪಕ್ಷಗಳನ್ನು ಕರೆದು ಚರ್ಚೆ ನಡೆಸಲಿ.

ಅದನ್ನು ಬಿಟ್ಟು ಮಗುವನ್ನೂ ಚಿವುಟಿ, ತೊಟ್ಟಿಲನ್ನೂ ತೂಗುವ ಕೆಲಸ ಮಾಡುವುದು ಬೇಡ. ದೇವಾಲಯಗಳಿಗೆ ರಕ್ಷಣೆ ನೀಡಲು ಸರಕಾರ ಸಂಪೂರ್ಣ ವಿಫಲವಾಗಿದೆ. ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತಿದೆ. ಜನರ ಗಮನ ಬೇರೆಡೆಗೆ ಸೆಳೆಯಲು ಸರಕಾರವೇ ಈ ನಾಟಕ ಆಡುತ್ತಿದೆಯಾ ಎಂಬ ಸಂಶಯ ಉಂಟಾಗುತ್ತಿದೆ. ಇದೂ ಬಿಜೆಪಿಯ ಕಾರ್ಯಸೂಚಿಯೇ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd