H.D.Kumaraswamy | ಜೆಡಿಎಸ್ ನ ಕುಪೇಂದ್ರ ಅವರಿಗೆ ಕಾಂಗ್ರೆಸ್ ಬೆಂಬಲಿಸಬೇಕು
ಬೆಂಗಳೂರು : ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಕಾಂಗ್ರೆಸ್ ಪಕ್ಷ ಕುಪೇಂದ್ರ ರೆಡ್ಡಿ ಅವರಿಗೆ ಪೂರ್ಣ ಬೆಂಬಲ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷವು ಡಿ.ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅವರು ಉದ್ದಿಮೆದಾರರು, ಸಮಾಜ ಸೇವಕರು ಮತ್ತು ಪ್ರಗತಿಪರ ಚಿಂತಕರು.
ರಾಜ್ಯಸಭೆ ಸದಸ್ಯರಾಗಿ ಅನುಭವವುಳ್ಳ ಅವರನ್ನು ಎಲ್ಲ ಪಕ್ಷಗಳು ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕು. ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಕಾಂಗ್ರೆಸ್ ಪಕ್ಷ ಕುಪೇಂದ್ರ ರೆಡ್ಡಿ ಅವರಿಗೆ ಪೂರ್ಣ ಬೆಂಬಲ ಕೊಡಬೇಕು.
https://twitter.com/hd_kumaraswamy/status/1534754215352221697?s=20&t=5IfvYke8TOs_DQS2QFiGNQ
ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕು. ಈ ಚುನಾವಣೆಯ ಪರಿಣಾಮಗಳ ಬಗ್ಗೆ ಇತಿಹಾಸ & ಜನತೆ ಭವಿಷ್ಯದ ದಿನಗಳಲ್ಲಿ ನಿರ್ಧರಿಸುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ. ಮಾನ್ಯ ಸುರ್ಜೆವಾಲಾ ಅವರು ಈ ಅಂಶ ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಬರೆದುಕೊಂಡಿದ್ದಾರೆ.








