ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಲ್ಪಸಂಖ್ಯಾತರನ್ನು ರಕ್ಷಿಸಬೇಕಾದ್ದು ಯಾವಾಗ? : ಕಾಂಗ್ರೆಸ್ ಗೆ ಹೆಚ್ ಡಿಕೆ “ಐದು” ಪ್ರಶ್ನೆ

admin by admin
August 21, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಆಡಳಿತ ಮತ್ತು ವಿರೋಧ ಪಕ್ಷದ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಗಲಭೆ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, “ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆ. ಈ ಘಟನೆಯನ್ನು ಪರಾಮರ್ಶಿಸಿ, ದುಷ್ಟರನ್ನು ಶಿಕ್ಷಿಸುವ ಕಾರ್ಯವಾಗಬೇಕಾಗಿತ್ತು. ಈ ಘಟನೆಯ ಅಧ್ಯಯನದ ಮೂಲಕ ಮುಂದಿನ ದಿನಗಳಲ್ಲಿ ಗಲಭೆಗಳು ಸಂಭವಿಸದಂತೆ ಎಚ್ಚರಿಕೆ, ಜವಾಬ್ದಾರಿಯುತ ನಡವಳಿಕೆಯನ್ನು ಸರ್ಕಾರ ಮತ್ತು ಅದರ ಚುಕ್ಕಾಣಿ ಹಿಡಿದಿರುವ ಪಕ್ಷ, ವಿಪಕ್ಷ ಪ್ರದರ್ಶಿಸಬೇಕಾಗಿತ್ತು. ಆದರೆ ಈ ಘಟನೆಯನ್ನೇ ನೆಪ ಮಾಡಿಕೊಂಡು ರಾಷ್ಟ್ರೀಯ ಪಕ್ಷಗಳೆರಡೂ ಕೆಸರೆರಚಾಟದಲ್ಲಿ ತೊಡಗಿವೆ ಎಂದು  ಬೇಸರ ವ್ಯಕ್ತಪಡಿಸಿದ್ದಾರೆ.

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

ಈ ಮೂಲಕ ಜನರ ಮನಸ್ಸಿನಲ್ಲಿರಬಹುದಾದ ತಮ್ಮ ವಿಶ್ವಾಸಾರ್ಹತೆ, ಉತ್ತರದಾಯಿತ್ವವನ್ನು ಬಿಜೆಪಿ-ಕಾಂಗ್ರೆಸ್ ಪಕ್ಷಗಳೆರಡೂ ಕಳೆದುಕೊಂಡು ನಿರ್ವಾಣಗೊಂಡಿವೆ. ಪ್ರತೀ ಘಟನೆಯಲ್ಲೂ ರಾಜಕೀಯ ಧ್ರುವೀಕರಣಕ್ಕೆ ಬೇಕಾಗುವ ಅಂಶ ಹುಡುಕುವ ಈ ಎರಡೂ ಪಕ್ಷಗಳು ನನ್ನ ಕೆಲವು ಪ್ರಶ್ನೆಗಳಿಗೆ ಉತ್ತರಿಸಬಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ ಕಾಂಗ್ರೆಸ್ ಗೆ ಅಲ್ಪಸಂಖ್ಯಾತರನ್ನು ರಕ್ಷಿಸಬೇಕಾದ್ದು ಯಾವಾಗ? ಎಂದು ಐದು ಪ್ರಶ್ನೆಗಳನ್ನು ಕೇಳಿದ್ದಾರೆ ಕುಮಾರಸ್ವಾಮಿ.

ಕಾಂಗ್ರೆಸ್ ಗೆ ಪ್ರಶ್ನೆ : ಅಲ್ಪಸಂಖ್ಯಾತರನ್ನು ರಕ್ಷಿಸಬೇಕಾದ್ದು ಯಾವಾಗ?

1. ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಮತ್ತು ಪಾದರಾಯನಪುರ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಕನಂತೆ ತನ್ನನ್ನು ತಾನು ಬಿಂಬಿಸಿಕೊಳ್ಳುತ್ತಿದೆ. ಅನ್ಯ ಕೋಮಿನ ಜನರ ಅಪರಾಧ ಪ್ರಕರಣಗಳ ಸಂದರ್ಭದಲ್ಲಿ ಎದ್ದು ನಿಲ್ಲುವ ಕಾಂಗ್ರೆಸ್, ಪೌರತ್ವ ತಿದ್ದುಪಡಿ ಕಾಯ್ದೆಯಂತಹ ಕಾಲದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಏಕೆ ನಿಲ್ಲಲಿಲ್ಲ? ಮಂಗಳೂರಿನಲ್ಲಿ ಗೋಲಿಬಾರ್ ಆಗಿ ಅಲ್ಪಸಂಖ್ಯಾತ ಯುವಕರು ಮೃತಪಟ್ಟಾಗ ಎಲ್ಲಿ ಹೋಗಿತ್ತು ಈ ಕಾಳಜಿ? ಕ್ರೈಂ ಸಂಭವಿಸಿದಾಗ ಮಾತ್ರವೇ ಕಾಂಗ್ರೆಸ್‍ಗೆ ಅಲ್ಪಸಂಖ್ಯಾತರ ರಕ್ಷಣೆ ಕಾಣಿಸುತ್ತದೆಯೇ?

2. ಗಲಭೆಯಲ್ಲಿ ನಷ್ಟವನ್ನು ಗಲಭೆಕೋರರಿಂದ ಸಂಗ್ರಹಿಸಲು ಹೊರಟ ಸರ್ಕಾರಕ್ಕೆ ಕಾಂಗ್ರೆಸ್ ಸಲಹೆಯೊಂದನ್ನು ನೀಡಿದೆ. ಇನ್ನೊಂದು ಕಡೆಯವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಹೇಳಿದೆ. ಹಾಗಾದರೆ ಆ ಇನ್ನೊಂದು ಕಡೆಯವರು ಯಾರು ಎಂದು ಕಾಂಗ್ರೆಸ್ ಧೈರ್ಯದಿಂದ ಹೇಳಬಹುದೇ?

3.ಎಸ್‍ಡಿಪಿಐ ಸಂಘಟನೆ ನಿಷೇಧಿಸುವ ವಿಚಾರ ಬಂದಾಗ ಕಾಂಗ್ರೆಸ್ ಸಿಡಿದೆದ್ದು ನಿಲ್ಲುತ್ತದೆ. ತಾಕತ್ತಿದ್ದರೆ ಅದನ್ನು ನಿಷೇಧಿಸಿ ಎಂದು ಆಡಳಿತದಲ್ಲಿರುವವರಿಗೆ ಸವಾಲೆಸೆಯುತ್ತದೆ. ಅದರ ನಿಷೇಧವಾಗುವುದು, ಆಗದೇ ಇರುವುದರಲ್ಲಿ ಕಾಂಗ್ರೆಸ್‍ಗೆ ಏನು ಲಾಭವಿದೆ? ಇದರ ವಿವರಣೆ ನೀಡಬಹುದೇ?

4. ಗಲಭೆಯಲ್ಲಿ ಏನೋ ರಾಜಕೀಯ ಷಡ್ಯಂತ್ರವಿದೆ ಎಂಬುದು ಕಾಂಗ್ರೆಸ್ ಆರೋಪ. ಆ ಷಡ್ಯಂತ್ರ ಕಾಂಗ್ರೆಸ್ ಒಳಗಿನದ್ದೋ, ಹೊರಗಿನದ್ದೋ? ಟಿಕೆಟ್ ಆಕಾಂಕ್ಷಿಗಳದ್ದೋ? ಗುಟ್ಟಾಗಿರುವ ಈ ವಿಷಯ ಬಹಿರಂಗಗೊಳಿಸಲು ಕಾಂಗ್ರೆಸ್‍ಗೆ ತಾಕತ್ತು ಇದೆಯೇ? ಬೇರೆ ಪಕ್ಷಗಳಿಂದ ಕರೆದುಕೊಂಡು ಹೋದ ಮುಖಂಡರು ಕಾಂಗ್ರೆಸ್‍ಗೆ ಕೆಲ ಬಾರಿ ಅಪಥ್ಯವಾಗುತ್ತಾರೆಯೇ?

5. ಆಂತರಿಕ ಸಮಸ್ಯೆಯನ್ನು ಗಲಭೆಯಾಗಿ ಪರಿವರ್ತಿಸಿ, ಎರಡು ಕೋಮುಗಳ ನಡುವೆ ಮನಸ್ಥಾಪ ತಂದಿಟ್ಟು, ಸಾಮಾಜಿಕ ಸಾಮರಸ್ಯ ಹಾಳು ಮಾಡಿದ ಬಗ್ಗೆ ಕಾಂಗ್ರೆಸ್‍ಗೆ ಸ್ವಲ್ಪವಾದರೂ ಅಳುಕಿದೆಯೇ? ಎಂದು ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ನಾಯಕರಿಗೆ “ಪಂಚ್” ಪ್ರಶ್ನೆ ಕೇಳಿದ್ದಾರೆ.

Tags: #Saaksha TVCongressH D KUMARASWAMYJDSkpcc
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram