2023 ರಲ್ಲಿ ಹೆಚ್ ಡಿ ಕುಮಾರಸ್ವಾಮಿ ಅಧಿಕಾರಕ್ಕೆ : ಹೆಚ್.ಡಿ.ರೇವಣ್ಣ HD Rewanna Saaksha tv
ಹಾಸನ : 2023 ರಲ್ಲಿ ರಾಜ್ಯದಲ್ಲಿ ಮತ್ತೆ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಅಧಿಕಾರಿಕ್ಕೆ ಬರಲಿದೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ರೇವಣ್ಣ ಪುತ್ರ ಸೂರಜ್ ರೇವಣ್ಣ ಜಯಭೇರಿ ಬಾರಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಖುಷಿ ಹಂಚಿಕೊಂಡ ರೇವಣ್ಣ, ಜಿಲ್ಲೆಯ ಆರು ಜನ ಶಾಸಕರು, ಸಂಸದರು, ದೇವೇಗೌಡರ ಆಶೀರ್ವಾದದಿಂದ ಗೆಲುವಾಗಿದೆ.
ಸ್ಥಳೀಯ ಸಂಸ್ಥೆಗಳ ಎಲ್ಲಾ ಪ್ರತಿನಿಧಿಗಳು ಪಕ್ಷಾತೀತವಾಗಿ ಗೆಲ್ಲಿಸಿದ್ದಾರೆ.
ಕುಮಾರಸ್ವಾಮಿ, ದೇವೇಗೌಡರು ಅವರ ಕಾಲದಲ್ಲಿ ಮಾಡಿದ ಅಭಿವೃದ್ಧಿ ಕೆಲಸ, ಸೇವೆ ಸೂರಜ್ ಗೆಲುವಿಗೆ ಕಾರಣ ಎಂದಿದ್ದಾರೆ.
ಇನ್ನು ಈ ಗೆಲುವನ್ನು ಸಂಸದರು, ಶಾಸಕರು, ಕಾರ್ಯಕರ್ತರಿಗೆ ಅರ್ಪಿಸುತ್ತೇವೆ.
ಇಡೀ ಜಿಲ್ಲೆಯನ್ನು ರಾಜ್ಯದಲ್ಲಿ ಮೊದಲನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುವುದು ನಮ್ಮ ಗುರಿಯಾಗಿದೆ.
2023 ಕ್ಕೆ ಜೆಡಿಎಸ್ ಅಧಿಕಾರಕ್ಕೆ ತರುವ ಗುರಿ ಇದೆ. ಶೃಂಗೇರಿ ಗುರುಗಳು, ಶಾರದಾ ದೇವಿ ಆಶಿರ್ವಾದ, ಸುತ್ತೂರು ಮಠದ ಆಶೀರ್ವಾದ ಈ ಕುಟುಂಬಕ್ಕೆ ಇದೆ.
ಸೂರಜ್ ಏನು ದಡ್ಡರಲ್ಲ, ಡಾಕ್ಟರ್ ಓದಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವಿಧಾನಪರಿಷತ್‌ನಲ್ಲಿ ಅವರು ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು.