ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ : ಹೆಚ್ಡಿಕೆ

1 min read

ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ : ಹೆಚ್ಡಿಕೆ H D Kumaraswamy

ಬೆಂಗಳೂರು : ನಟ, ರಾಜಕಾರಣಿ ನಿಖಿಲ್ ಕುಮಾರ್ ಹಾಗೂ ರೇವತಿ ದಂಪತಿಗೆ ಗಂಡು ಮಗು ಜನಿಸಿದ್ದು, ಟ್ವಿಟ್ಟರ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ.

H D Kumaraswamy saaksha TV

ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd