ರಾಮನಗರ: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಚುನಾವಣಾ ಚಾಣಕ್ಯ ಎಂದೇ ಪ್ರಖ್ಯಾತಿ ಪಡೆದಿರುವ ಪ್ರಶಾಂತ್ ಕಿಶೋರ್ ಅವರ ಜೊತೆ ಕೈ ಜೋಡಿಸಲಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ ಮಾಹಿತಿ ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ಈಗಿನಿಂದಲೇ ಸಿದ್ಧತೆ ನಡೆಸಿದ್ದೇವೆ. ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಸಂಪರ್ಕದಲ್ಲಿ ಇದ್ದೇವೆ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಐಎಎಸ್ ಅಧಿಕಾರಿ ಬದಲು ಮಂತ್ರಿ ಮನೆಯ ಜವಾನರಾಗಿ ಕೆಲಸ ಮಾಡುತ್ತಿದ್ದಾರೆ. ಕೋರ್ಟ್ ಆದೇಶಗಳನ್ನೂ ಧಿಕ್ಕರಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಜೆಡಿಎಸ್ ಕಾರ್ಯಕರ್ತರು ಟಾರ್ಗೆಟ್ ಆಗಿದ್ದಾರೆ. ಅಧಿಕಾರಿ ನಡವಳಿಕೆ ಬಗ್ಗೆ ಸರ್ಕಾರದ ಗಮನಕ್ಕೂ ತಂದಿದ್ದೇನೆ ಎಂದರು.
ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!
ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...








