ಕುಸುಮಾ (Kusuma) ಡಿ.ಕೆ.ರವಿ ತಂದೆ-ತಾಯಿಯನ್ನೇ ನೋಡ್ಲಿಲ್ಲ, ನಿಮ್ಮ ಕಷ್ಟ ಕೇಳ್ತಾರಾ : ಹೆಚ್ ಡಿಕೆ (H D Kumaraswamy)
ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಹಳ್ಳಿಯಲ್ಲಿರುವ ಡಿ.ಕೆ ರವಿ ಅವರ ತಂದೆ-ತಾಯಿಯನ್ನೇ ನೋಡಲಿಲ್ಲ. ಈಗ ನಿಮ್ಮ ಕಷ್ಟಗಳನ್ನೆಲ್ಲಾ ಕೇಳ್ತಾರಾ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿ ವಿ ಕೃಷ್ಣಮೂರ್ತಿ ಪರ ಹೆಚ್ ಡಿ ಕುಮಾರಸ್ವಾಮಿ ಪ್ರಚಾರ ನಡೆಸಿದರು. ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಕುಸುಮಾ ಬಗ್ಗೆ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ನಾನು ನೋಡಿದ್ದೇನೆ.
ಬಡ ಕುಟುಂಬಗಳ ರಕ್ಷಣೆಗಾಗಿ ರಾಜಕಾರಣಕ್ಕೆ ಬಂದಿದ್ದೇನೆ ಎಂದು ಹೇಳುತ್ತಾರೆ. ಆದರೆ, ಹಳ್ಳಿಯಲ್ಲಿರುವ ಡಿ.ಕೆ.ರವಿ ಅವರ ತಂದೆ-ತಾಯಿಯನ್ನೇ ನೋಡಲಿಲ್ಲ. ಅವರ ಬದುಕಿಗೆ ಒಂದು ದಾರಿ ಮಾಡಿ ಕೊಡಲಾಗಲಿಲ್ಲ. ಈಗ ನಿಮ್ಮ ಕಷ್ಟಗಳನ್ನೆಲ್ಲಾ ಕೇಳ್ತಾರಾ, ಸಮಸ್ಯೆಗಳನ್ನು ಬಗೆಹರಿಸ್ತಾರಾ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಇದನ್ನೂ ಓದಿ : ಯಡಿಯೂರಪ್ಪ ಮತ್ತು ಮೋದಿ ಎಳೆ ಕಡಸುಗಳಾ? : ಸಿದ್ದರಾಮಯ್ಯ
ಜೆಡಿಎಸ್ ಪಕ್ಷ ಬಡವರು, ಶ್ರಮಿಕರು, ರೈತರು ಬೆಳೆಸಿದ ಪಕ್ಷ. ನಮ್ಮ ಹೊಣೆಗಾರಿಕೆ ಏನಿದ್ದರೂ ಜನರದ್ದು, ನಾವು ಅಂಬಾನಿ, ಆದಾನಿಗೆ ನಮ್ಮ ಪಕ್ಷದ ಜವಾಬ್ದಾರಿ ನೀಡಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದರು.
ನಾವು ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದ್ದೇವೆ. ಜೆಡಿಎಸ್ನ್ನು ಯಾರು ಕೊಂಡುಕೊಳ್ಳುವುದಕ್ಕೆ ಆಗಲ್ಲ. ಕೊರೊನಾ ಬಂದಾಗ ಪ್ರಧಾನಿ ಮೋದಿ ಚಪ್ಪಾಳೆ ತಟ್ಟಿ ಅಂದ್ರು, ಆಮೇಲೆ ದೀಪ ಬೆಳಗಿಸಿ ಅಂದ್ರು. ಆ ದೀಪ ಹಚ್ಚಿ ಬಿಜೆಪಿಯವರು ತಮ್ಮ ಜೀವನ ಬೆಳಗಿಸಿಕೊಂಡ್ರು. ಜನ ರ ಕಷ್ಟಗಳಿಗೆ ದೀಪ ಹಚ್ಚಿ ಬೆಳಕು ನೀಡಲಿಲ್ಲ ಎಂದು ದೂರಿದರು.
ಹತ್ತು ವರ್ಷದಿಂದ ಬಿಜೆಪಿ ಕಾಂಗ್ರೆಸ್ನವರು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಪ್ರತಿವರ್ಷ ಕಾಲುವೆ ದುರಸ್ಥಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಾರೆ. ಆದರೂ, ಮಳೆ ಬಂದಾಗ ಬೆಂಗಳೂರಿನ ಅನೇಕ ಪ್ರದೇಶಗಳಿಗೆ ನೀರು ನುಗ್ಗುತ್ತದೆ.
ಇದನ್ನೂ ಓದಿ : ಜೆಡಿಎಸ್ ಗೆ ಚೂರಿ ಹಾಕಿದ `ಸಿದ್ದರಾಮಯ್ಯ ಹೀರೋ ಅಲ್ಲ ವಿಲನ್’ : ಹೆಚ್.ಡಿ.ಕೆ
ನಮ್ಮ ದುಡ್ಡಿನಲ್ಲಿ ಮಹಾರಾಷ್ಟ್ರದವರ ಪ್ರತಿಮೆಯನ್ನು ನಮ್ಮ ನೆಲದಲ್ಲಿ ಬಿಜೆಪಿಯವರು ಸ್ಥಾಪಿಸುತ್ತಾರೆ. 2-3 ತಿಂಗಳಲ್ಲಿ ಬೆಂಗಳೂರನ್ನು ಮಾದರಿ ನಗರವನ್ನಾಗಿ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ, ಮೊನ್ನೆ ಮಳೆ ಬಂದಾಗ ಬೆಂಗಳೂರೇ ಕೊಚ್ಚಿಕೊಂಡು ಹೋಯ್ತು. ಇದೇನಾ ಇವರ ಮಾದರಿ ನಗರ ಎಂದು ಪ್ರಶ್ನಿಸಿದರು.
ಇನ್ನು ನಾನು ಮುಖ್ಯಮಂತ್ರಿಯಾಗಿದ್ದಾಗ ಕೇವಲ ರೈತರ ಸಾಲಮನ್ನಾ ಮಾಡಿರುವುದಲ್ಲದೇ, ಬೀದಿಬದಿ ವ್ಯಾಪಾರಿಗಳಿಗೆ ಸಹಾಯವಾಗಲಿ ಎಂದು ಬಡವರ ಬಂಧು ಆರಂಭಿಸಿದೆ.
ಸಾಲಗಾರರ ಶೋಷಣೆಯಿಂದ ಜನರನ್ನು ರಕ್ಷಿಸಲು ಋಣಮುಕ್ತ ಕಾಯಿದೆ ಜಾರಿಗೆ ತಂದಿದ್ದೆ. ಗಾಮೆರ್ಂಟ್ಸ್ಗೆ ಕೆಲಸಕ್ಕೆ ಹೋಗುವ ಮಹಿಳೆಯರಿಗಾಗಿ ನೂರು ಕೋಟಿ ರೂ. ತೆಗೆದಿರಿಸಿದ್ದೆ ಇವುಗಳನ್ನೆಲ್ಲಾ ಈಗಿನ ಸರಕಾರ ನಿಲ್ಲಿಸಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಮುಂದುವರಿದು ಬಿಜೆಪಿ ಅಭ್ಯರ್ಥಿ ವಿರುದ್ಧ ಬೆಂಕಿಕಾರಿದ ಕುಮಾರಸ್ವಾಮಿ, ಈ ಹಿಂದೆ ಕಾಂಗ್ರೆಸ್ ನಲ್ಲಿದ್ದ ಬಿಜೆಪಿ ಅಭ್ಯರ್ಥಿ ಹಣ ಲೂಟಿ ಮಾಡಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ದೌರ್ಜನ್ಯ, ಚುನಾವಣಾ ಅಕ್ರಮ ಎಸಗುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರೆ.
ಕನಕಪುರದಿಂದ ಗೂಂಡಾಗಳನ್ನು ಕರೆಸಿ, ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮುನಿರತ್ನ ಕಾಂಗ್ರೆಸ್ ವಿರುದ್ಧ ಆರೋಪಿಸುತ್ತಿದ್ದಾರೆ. ಆರೋಪ-ಪ್ರತ್ಯಾರೋಪಗಳಿಗಿಂತ ರಾಜರಾಜೇಶ್ವರಿ ನಗರದಲ್ಲಿ ನಮಗೆ ಶಾಂತಿಯ ಅವಶ್ಯಕತೆ ಇದೆ ಎಂದು ಹೇಳಿದರು.
ಇದನ್ನೂ ಓದಿ : ಗೂಂಡಾಗಿರಿಗೆ ನಾವು ಹೆದರುವವರಲ್ಲ.. ಹುಷಾರ್ ! : ಸಿದ್ದರಾಮಯ್ಯ
ಈ ಸಂದರ್ಭ ದಲ್ಲಿ ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ, ಮಳವಳ್ಳಿ ಶಾಸಕ ಅನ್ನದಾನಿ, ಪರಿಷತ್ ಸದಸ್ಯ ರಮೇಶ್ ಗೌಡ, ಮಾಜಿ ಪರಿಷತ್ ಸದಸ್ಯ ಟಿ.ಎನ್.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸೇರಿ ಅನೇಕ ಮುಖಂಡರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










