H D Kumaraswamy | ಇ.ಡಿ.ವಿಚಾರಣೆ ನೆಪದಲ್ಲಿ ರಾಹುಲ್‌ ಗಾಂಧಿಗೆ ಕಿರುಕುಳ

1 min read

H D Kumaraswamy | ಇ.ಡಿ.ವಿಚಾರಣೆ ನೆಪದಲ್ಲಿ ರಾಹುಲ್‌ ಗಾಂಧಿಗೆ ಕಿರುಕುಳ

ಹಾಸನ : ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನ್ಯಾಷನಲ್ ಹೆರಾರ್ಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನ ಇ.ಡಿ.ವಿಚಾರಣೆ ಒಳಪಡಿಸಿದರ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಹಾಸನದಲ್ಲಿ ಮಾತನಾಡಿದ, “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ.

ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ ಇರುತ್ತವೆ. ಅರ್ಧ ಗಂಟೆಯಲ್ಲೇ ಎಲ್ಲಾ ವಿಚಾರಣೆ‌ ಮಾಡಿ ಮುಗಿಸಬಹುದು” ಎಂದು  ಹೇಳಿದರು.

H D Kumaraswamy Rahul Gandhi harassed during ED raid  saaksha tv
H D Kumaraswamy Rahul Gandhi harassed during ED raid saaksha tv

ಸುಮ್ಮನೆ ರಾಹುಲ್‌ ಗಾಂಧಿ ಅವರಿಗೆ ಕಿರಿಕುಳ ನೀಡುವ ದುರುದ್ದೇಶದಿಂದ ಈ ರೀತಿ ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದ ಕುಮಾರಸ್ವಾಮಿ, ಸುಬ್ರಹ್ಮಣ್ಯಸ್ವಾಮಿ ದೂರು ನೀಡಿದರು ಎಂದು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಸ್ವತಃ ಪ್ರಧಾನಿಗಳಿಗೇ ಪತ್ರ ಬರೆದು 40% ಕಮಿಷನ್‌ ಬಗ್ಗೆ ದೂರಿದ್ದರು.

ಈ ಬಗ್ಗೆ ಯಾಕೆ ಇಲ್ಲಿಯವರೆಗೆ ತನಿಖೆ ‌ನಡೆಸಲಿಲ್ಲ ಎಂದು‌ ಅವರು ಪ್ರಶ್ನೆ ಮಾಡಿದರು.

 

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd