ಯಾರು ಏನೇ ಹೇಳಲಿ ಶಿರಾದಲ್ಲಿ ನಾವೇ ಗೆಲ್ತೀವಿ : ಹೆಚ್ ಡಿಕೆ
ಬೆಂಗಳೂರು : ಯಾರು ಏನೇ ಹೇಳಲಿ, ಏನೇ ಮಾತನಾಡಲಿ ಶಿರಾದಲ್ಲಿ ನಾವು ಗೆಲ್ತೀವಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಎರಡೂ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಗೆಲುವು ಪಡೆದಿದ್ದೇವೆ ಎಂದು ಹೇಳುತ್ತಿವೆ.

ಚುನಾವಣೆಯ ಫಲಿತಾಂಶದ ಬಳಿಕ ಮುಖ್ಯಮಂತ್ರಿ, ವಿರೋಧ ಪಕ್ಷ ಸ್ಥಾನ ಬದಲಾಗುತ್ತೆ ಅಂತಾ ಚರ್ಚೆ ಆಗುತ್ತಿದೆ. ಸಿಎಂ ಪುತ್ರ ಶಿರಾದಲ್ಲಿ ನಮ್ಮದೇ ಗೆಲುವು ಅಂತಾರೆ.
ಇವರ ಮಾತುಗಳನ್ನು ಕೇಳಿದ್ರೆ ನಾವು ಮೂರನೇ ಸ್ಥಾನಕ್ಕೆ ಬರ್ತಿವಾ ಅನಿಸುತ್ತಿದೆ. ಆದ್ರೆ ಯಾರು ಏನೇ ಹೇಳಲಿ, ಏನೇ ಮಾತನಾಡಲಿ ಶಿರಾದಲ್ಲಿ ನಾವು ಗೆಲ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಕೇಸರಿ ಪಡೆಯ ಟಾರ್ಗೆಟ್ ಫಿಕ್ಸ್ : ಇನ್ನೇನಿದ್ದರೂ ಆಕ್ಷನ್ ಅಷ್ಟೆ ಬಾಕಿ
ಶಿರಾ ಜನರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಆರ್.ಆರ್ ನಗರದಲ್ಲಿ ನಮ್ಮ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದು, ಆರ್.ಆರ್. ನಗರದಲ್ಲಿ ಗೆಲುವಿನ ಹತ್ತಿರಕ್ಕೆ ಹೋಗ್ತೀವಿ ಎಂದು ರಾಜರಾಜೇಶ್ವರಿ ನಗರದಲ್ಲಿ ಗೆಲುವು ಸಾಧಿಸಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡರು.

ಇನ್ನು ಇದೇ ವೇಳೆ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದ ಬಗ್ಗೆ ಮಾತನಾಡಿ, ಯಾವುದೇ ಹಳೆಯ ಪ್ರಕರಣವನ್ನು ತನಿಖೆ ನಡೆಸಿ ಕ್ರಮಕೈಗೊಳ್ಳಲು ಮುಂದಾದರೇ ರಾಜಕೀಯ ನಾಯಕರಾದ ನಾವು ಅದನ್ನು ರಾಜಕೀಯ ಪ್ರೇರಿತ ಎಂದು ಹೇಳಿ ಶೆಲ್ಟರ್ ಪಡೆದುಕೊಳ್ಳಲು ಯತ್ನಿಸುತ್ತೇವೆ.
ಯೋಗೇಶ್ ಗೌಡ ಪ್ರಕರಣದಲ್ಲಿ ಸಾರ್ವಜನಿಕವಾಗಿ ಹಲವಾರು ಗುಮಾನಿ ಇತ್ತು. ಬಿಜೆಪಿ ಸರ್ಕಾರ ಬಂದು ತನಿಖೆಗೆ ಕೊಟ್ಟಿತ್ತು.
ಭಾಲ್ಕಿ ವಸತಿ ಹಗರಣ: ಖಂಡ್ರೆ-ಖೂಬಾ ಬಹಿರಂಗ ಚರ್ಚೆಗೆ ಬಿತ್ತು ಬ್ರೇಕ್..!
ಪ್ರಕರಣದಲ್ಲಿ ನಿಜವಾದ ಸತ್ಯಾಸತ್ಯ ಹೊರ ಬರಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ರಾಜಕೀಯ ಪ್ರಭಾವಕ್ಕೆ ಒಳಗಾಗದೇ ತನಿಖೆ ಮಾಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








