“ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ದಹಸ್ತನೇ, ನೀವೇ ʼಪರ್ಸಂಟೇಜ್ ವ್ಯವಹಾರದ ಪಿತಾಮಹ”
ಬೆಂಗಳೂರು : ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ದಹಸ್ತನೇ, ನೀವೇ ʼಪರ್ಸಂಟೇಜ್ ವ್ಯವಹಾರದ ಪಿತಾಮಹʼ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್ ನಲ್ಲಿ ಸಮರ ಮುಂದುವರೆಸಿರುವ ಹೆಚ್ ಡಿ ಕುಮಾರಸ್ವಾಮಿ, ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ದಹಸ್ತನೇ, ನೀವೇ ʼಪರ್ಸಂಟೇಜ್ ವ್ಯವಹಾರದ ಪಿತಾಮಹʼ. ಆಪ್ತಶಾಸಕರಿಗೆ ಮೀಟಿಂಗ್ʼಗೆ ಇಂತಿಷ್ಟು ಎಂದು ಕೊಟ್ಟು ಕಮೀಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ʼಮಾಸ್ಟರ್ ಆಗಿ ಅಡ್ಡಡ್ಡ ನುಂಗಿ ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾದ ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ ಎಂದು ಕಿಡಿಕಾರಿದ್ದಾರೆ.
2018ರಲ್ಲಿ ಒಳ್ಳೇ ಆಡಳಿತ ನಡೆಸಲೆಂದು ಕುಮಾರಸ್ವಾಮಿಗೆ ಅಧಿಕಾರ ಕೊಟ್ಟೆವು ಎಂದಿದ್ದೀರಿ. ಆ ಮುನ್ನ 5 ವರ್ಷ ಕೆಟ್ಟ ಆಡಳಿತ ಕೊಟ್ಟೆ ಎಂದು ನೀವೇ ಒಪ್ಪಿಕೊಂಡ ಹಾಗಾಯಿತಲ್ಲ. ಜೆಡಿಎಸ್ 30 ಸೀಟಿನ ಪಕ್ಷವಲ್ಲ,123 ಕ್ಷೇತ್ರಗಳ ಸವಾಲು ಸ್ವೀಕರಿಸಿ ಹೊರಟ ಪಕ್ಷ. ಇದು ಗೊತ್ತಾಗಿಯೇ ಪಕ್ಷವಾತ ಬಂದ ಹಾಗೆ ನೀವು ಚಡಪಡಿಸುತ್ತಿದ್ದೀರಿ!!
https://twitter.com/hd_kumaraswamy/status/1515879587028549634?s=20&t=LYBLj-UgCaNww7XkkZipFw
ಕದ್ದಮಾಲು ಕೈಗೆ ಕಟ್ಟಿ ಸಿಎಂ ಕುರ್ಚಿಯಲ್ಲಿ ನಿರ್ಲಜ್ಜವಾಗಿ ಮೆರೆದ ನಿಮ್ಮ #ಕತ್ತಲೆಚಾರಿತ್ರ್ಯ ಕೊಳೆತು ನಾರುತ್ತಿದೆ. ನಿಮ್ಮ ಕೈಲಿ ಮಿರಮಿರ ಮಿಂಚಿದ #ಹ್ಯೂಬ್ಲೆಟ್_ವಾಚ್ ಎಲ್ಲಿಂದಾ ಬಂತು? ಕಳ್ಳಮಾಲು ಮಾಲೀಕನಿಗೆ ಸೇರದೆ ನಿಮ್ಮ ಅಮೃತಹಸ್ತ ಅಲಂಕರಿʼಸಿದ್ದುʼ ಹೇಗೆ? ಆ ವಾಚ್ ತಂದ್ಕೊಟ್ಟ ಪೊಲೀಸಯ್ಯನಿಗೆ ವರ್ಗಾವಣೆ ಕೃಪೆ ಕರುಣಿಸಿದಿರಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈಶ್ವರಪ್ಪ ವಿಷಯದಲ್ಲಿ ಡಿವೈಎಸ್ಪಿ ಗಣಪತಿ ಅವರ ಹೆಸರು ಎಳೆದು ತಂದಿದ್ದೀರಿ. ನಾನು ಹೇಳಿದ್ದು ಕಲ್ಲಪ್ಪಹಂಡೀಭಾಗ್ ಬಗ್ಗೆ. ಹಿಂದುಳಿದ ಸಮುದಾಯಕ್ಕೆ ಸೇರಿದ್ದ ಆ ಪ್ರಾಮಾಣಿಕ ಅಧಿಕಾರಿಗೆ ಇನ್ನಿಲ್ಲದ ಕಿರುಕುಳ ಕೊಟ್ಟು ಮುಗಿಸಿದಿರಿ. ಇಲಾಖೆಯಲ್ಲಿ ಒಳ್ಳೇ ಭವಿಷ್ಯವಿದ್ದ ಅವರ ಜೀವಕ್ಕೆ ಎರವಾದಿರಿ. ಅವರ ಸಾವಿಗೆ ನಿಮ್ಮ ಸರಕಾರ ಕಾರಣ.ಅಲ್ಲವೇ?
ಈಶ್ವರಪ್ಪ ವಿಷಯದಲ್ಲಿ ಡಿವೈಎಸ್ಪಿ ಗಣಪತಿ ಅವರ ಹೆಸರು ಎಳೆದು ತಂದಿದ್ದೀರಿ. ನಾನು ಹೇಳಿದ್ದು ಕಲ್ಲಪ್ಪಹಂಡೀಭಾಗ್ ಬಗ್ಗೆ. ಹಿಂದುಳಿದ ಸಮುದಾಯಕ್ಕೆ ಸೇರಿದ್ದ ಆ ಪ್ರಾಮಾಣಿಕ ಅಧಿಕಾರಿಗೆ ಇನ್ನಿಲ್ಲದ ಕಿರುಕುಳ ಕೊಟ್ಟು ಮುಗಿಸಿದಿರಿ. ಇಲಾಖೆಯಲ್ಲಿ ಒಳ್ಳೇ ಭವಿಷ್ಯವಿದ್ದ ಅವರ ಜೀವಕ್ಕೆ ಎರವಾದಿರಿ. ಅವರ ಸಾವಿಗೆ ನಿಮ್ಮ ಸರಕಾರ ಕಾರಣ.ಅಲ್ಲವೇ? 13/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 18, 2022
ನಿಮ್ಮ ಕತ್ತಲೆ ಮುಖವಾಡ & ʼಪರ್ಸಂಟೇಜ್ ಪಲ್ಲಕ್ಕಿʼಯಲ್ಲಿ ಪವಡಿಸಿದ ನಿಮ್ಮ ನಿಜಬಣ್ಣ ಇನ್ನೇನು ಕಳಚಿಬೀಳಲಿದೆ. ನಿಮ್ಮ ಸುಳ್ಳು ನಿಮ್ಮನ್ನೇ ಸುಡುವ ಕಾಲ ಸನಿಹದಲ್ಲಿದೆ ಎಂದು ಟ್ವಿಟ್ಟರ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ. H D Kumaraswamy siddaramaiah h d devegouda jds







