H D Kumaraswamy | ರಾಜ್ಯಗಳ ಪ್ರವಾಸಕ್ಕೆ ಹಿಂದಿ ಬಲ್ಲ ವಿದ್ಯಾರ್ಥಿಗಳಿಗೆ ಆಧ್ಯತೆ : ಹೆಚ್ಡಿಕೆ ಆಕ್ರೋಶ
ಬೆಂಗಳೂರು : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ‘ಒಂದು ಭಾರತ-ಶ್ರೇಷ್ಠ ಭಾರತ’ ಕಾರ್ಯಕ್ರಮದಡಿ ಪ್ರೌಢಶಾಲೆ & ಪಿಯುಸಿ ವಿದ್ಯಾರ್ಥಿಗಳನ್ನು ಹೊರ ರಾಜ್ಯಗಳ ಪ್ರವಾಸಕ್ಕೆ ಕರೆದೊಯ್ಯಲು ಕನ್ನಡ ವಿದ್ಯಾರ್ಥಿಗಳನ್ನು ಕಡೆಗಣಿಸಿ ಹಿಂದಿ ಮಾತನಾಡುವ ವಿದ್ಯಾರ್ಥಿಗಳನ್ನೇ ಆಯ್ಕೆ ಮಾಡುವಂತೆ ಆದೇಶಿಸಲಾಗಿದೆ. ಇದಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ‘ಒಂದು ಭಾರತ, ಒಂದು ಭಾಷೆ’ಯ ಹುನ್ನಾರ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು; ಶಾಲಾ ಮಕ್ಕಳ ಪ್ರವಾಸದಲ್ಲಿಯೂ ಕನ್ನಡ ವಿದ್ಯಾರ್ಥಿಗಳನ್ನು ಕಡೆಗಣಿಸಿ ಕನ್ನಡವನ್ನು ಹತ್ತಿಕ್ಕುವ ಹೀನಕೃತ್ಯ ಎಸಗುತ್ತಿವೆ. ಇದು ಅಕ್ಷಮ್ಯ ಮತ್ತು ಖಂಡನೀಯ.
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ‘ಒಂದು ಭಾರತ-ಶ್ರೇಷ್ಠ ಭಾರತ’ ಕಾರ್ಯಕ್ರಮದಡಿ ಪ್ರೌಢಶಾಲೆ & ಪಿಯುಸಿ ವಿದ್ಯಾರ್ಥಿಗಳನ್ನು ಹೊರ ರಾಜ್ಯಗಳ ಪ್ರವಾಸಕ್ಕೆ ಕರೆದೊಯ್ಯಲು ಕನ್ನಡ ವಿದ್ಯಾರ್ಥಿಗಳನ್ನು ಕಡೆಗಣಿಸಿ ಹಿಂದಿ ಮಾತನಾಡುವ ವಿದ್ಯಾರ್ಥಿಗಳನ್ನೇ ಆಯ್ಕೆ ಮಾಡುವಂತೆ ಆದೇಶಿಸಲಾಗಿದೆ.

ಮಾಧ್ಯಮಗಳಲ್ಲಿ ವರದಿಯಾಗಿರುವ ಈ ಆಘಾತಕಾರಿ ಸುದ್ದಿ ನನಗೆ ತೀವ್ರ ಕಳವಳ ಉಂಟು ಮಾಡಿದೆ. ಹಿಂದಿ ಮಾತನಾಡುವ ವಿದ್ಯಾರ್ಥಿಗಳನ್ನು ಮಾತ್ರ ಪ್ರವಾಸಕ್ಕೆ ಆಯ್ಕೆ ಮಾಡುವಂತೆ ಬೆಂಗಳೂರು ಡಿಡಿಪಿಐ ಆದೇಶ ನೀಡಿರುವುದು ಕನ್ನಡಕ್ಕೆ ಬಗೆದಿರುವ ಘೋರ ದ್ರೋಹ.
ಇಂಥ ಕರಾಳ ಆದೇಶಕ್ಕೆ ರಾಜ್ಯ ಬಿಜೆಪಿ ಸರಕಾರ ಮತ್ತು ಶಿಕ್ಷಣ ಸಚಿವರೇ ನೇರ ಹೊಣೆ. ಸರಕಾರಕ್ಕೆ ಗೊತ್ತಿಲ್ಲದೆಯೇ ಇಂಥ ಆದೇಶ ಬರಲು ಸಾಧ್ಯವೇ? ತಿಳಿಗೇಡಿ ಆಡಳಿತಕ್ಕೆ ಹಿಡಿದ ಕನ್ನಡಿ ಇದು ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.








