HDK | ಬಿಜೆಪಿ ಬೆಳವಣಿಗೆಯ ಹಿನ್ನೆಲೆ ಅರಿತು ಮೋದಿ ಭಾಷಣ ಮಾಡಬೇಕಿತ್ತು
ಬೆಂಗಳೂರು : “ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬಿಜೆಪಿ ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, “ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು.” ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಉಪದೇಶವಿದು. ವಾಸ್ತವ ಗುರುತಿಸಿ, ಬಿಜೆಪಿ ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ.
ಕುಟುಂಬ ಪಕ್ಷಗಳ ಟೀಕೆ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ. ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂಥ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ.
ಈ ಪರಿವಾರ ಹಂತಹಂತವಾಗಿ ಬೆಳೆದು ಹೆಮ್ಮರವಾಗಿ, ಕ್ರಮೇಣ ಅನೇಕ ಟಿಸಿಲುಗಳೊಡೆದು ಬೇರೆ ಬೇರೆಯಾಯಿತು. ಬಿಜೆಪಿಯೂ ಈ ಪರಿವಾರದ ಒಂದು ತುಣುಕಷ್ಟೇ. ಜೆಡಿಎಸ್, ಜೆಡಿಯು, ಆರ್ʼಜೆಡಿ, ಬಿಜೆಡಿ, ಸಮಾಜವಾದಿ ಪಕ್ಷಗಳೆಲ್ಲ ಈ ಮಹಾವೃಕ್ಷದ ರೆಂಬೆ-ಕೊಂಬೆಗಳೇ. 4/17
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 27, 2022
ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ಹೋರಾಟದ ಫಲಗಳಲ್ಲಿ ಜನಸಂಘವೂ ಒಂದು. ತುರ್ತು ಪರಿಸ್ಥಿತಿ ಹೇರಿದಾಗ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ನೂರಾರು ಸಣ್ಣಪುಟ್ಟ ಪಕ್ಷಗಳನ್ನು ಒಗ್ಗೂಡಿಸಿದ್ದು ಅವರೇ. ಇವೆಲ್ಲಾ ಒಟ್ಟಾಗಿ ʼಜನತಾ ಪರಿವಾರʼ ಉದಯ ಆಯಿತು.
ಈ ಪರಿವಾರ ಹಂತಹಂತವಾಗಿ ಬೆಳೆದು ಹೆಮ್ಮರವಾಗಿ, ಕ್ರಮೇಣ ಅನೇಕ ಟಿಸಿಲುಗಳೊಡೆದು ಬೇರೆ ಬೇರೆಯಾಯಿತು. ಬಿಜೆಪಿಯೂ ಈ ಪರಿವಾರದ ಒಂದು ತುಣುಕಷ್ಟೇ. ಜೆಡಿಎಸ್, ಜೆಡಿಯು, ಆರ್ʼಜೆಡಿ, ಬಿಜೆಡಿ, ಸಮಾಜವಾದಿ ಪಕ್ಷಗಳೆಲ್ಲ ಈ ಮಹಾವೃಕ್ಷದ ರೆಂಬೆ-ಕೊಂಬೆಗಳೇ.
ಜನತಾ ಪರಿವಾರದ ಟಿಸಿಲುಗಳು ದೇಶದ ಉದ್ದಗಲಕ್ಕೂ ಬೃಹತ್ ವೃಕ್ಷಗಳಾಗಿ ಬೆಳೆದು ನಿಂತಿವೆ. ಅವುಗಳ ಬೇರುಗಳು ಆಳಕ್ಕಿಳಿದು ಬಲಿಷ್ಠವಾಗಿವೆ; ಕೀಳುವುದು, ಅಲ್ಲಾಡಿಸುವುದು ಸುಲಭವಲ್ಲ. ಮೋದಿ ಅವರಿಗೆ ಈ ವಿಷಯವೂ ತಿಳಿಯದ್ದೇನಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಕುಟುಕಿದ್ದಾರೆ.








