ಅಭಿವೃದ್ಧಿಗೆ ಸರ್ಕಾರದಲ್ಲಿ ಹಣವೆಲ್ಲಿದೆ ಮುಖ್ಯಮಂತ್ರಿಗಳೇ : ಕುಮಾರಸ್ವಾಮಿ

1 min read
h-d-kumaraswamy

ಅಭಿವೃದ್ಧಿಗೆ ಸರ್ಕಾರದಲ್ಲಿ ಹಣವೆಲ್ಲಿದೆ ಮುಖ್ಯಮಂತ್ರಿಗಳೇ : ಕುಮಾರಸ್ವಾಮಿ

ಬೆಂಗಳೂರು : ಮಸ್ಕಿ ಕ್ಷೇತ್ರವಿರಲಿ, ಬೇರಾವ ಕ್ಷೇತ್ರವೇ ಆಗಿರಲಿ ಅಭಿವೃದ್ಧಿಗೆ ಸರ್ಕಾರದಲ್ಲಿ ಹಣವೆಲ್ಲಿದೆ ಮುಖ್ಯಮಂತ್ರಿಗಳೇ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ಮಸ್ಕಿಯ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಬಿಎಸ್ ವೈ ಹೇಳಿದ್ದು, ಈ ವಿಚಾರವಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿ, ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಇತ್ತೀಚೆಗೆ ಪ್ರಚಾರ ಸಭೆಯಲ್ಲಿ ಹೇಳಿರುವುದು ಗಮನಕ್ಕೆ ಬಂತು. ಮಸ್ಕಿಯಲ್ಲಿ ಶಾಸಕರಾಗಿದ್ದವರ ಮಹಾತ್ಯಾಗದಿಂದ ಬಿಎಸ್‍ವೈ ಅವರಿಗೆ ಅಧಿಕಾರ ಸಿಕ್ಕು 2 ವರ್ಷಗಳಾಗುತ್ತಾ ಬಂದಿವೆ. ಈ ವರೆಗೆ ಯಾಕಾಗಿರಲಿಲ್ಲ ಮಸ್ಕಿಯ ಅಭಿವೃದ್ಧಿ..? ಪ್ರಗತಿಗೆ ಉಪಚುನಾವಣೆ ಮುಹೂರ್ತವಾಗಿತ್ತೇ ಎಂದು ಪ್ರಶ್ನಿಸಿದ್ದಾರೆ.

h-d-kumaraswamy

ಚುನಾವಣೆ ನಿಗದಿಯಾಗಿದ್ದರಿಂದ ಮಸ್ಕಿ ಅಭಿವೃದ್ಧಿಗೆ ಈಗ ಮುಹೂರ್ತ ಬಂದಿದೆ, ಒಪ್ಪೋಣ. ಆದರೆ, ವರ್ಷದ ಹಿಂದೆಯೇ ಚುನಾವಣೆಗಳಾದ ‘ಬಾಂಬೆ ತಂಡ’ದ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿ ಎಷ್ಟಾಗಿದೆ? ಅವೆಲ್ಲವೂ ಭೂಲೋಕದ ಸ್ವರ್ಗಗಳಾಗಿವೆಯೇ ಸಿಎಂ ಯಡಿಯೂರಪ್ಪನವರೇ? ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನದ್ದು ಎಂದು ನಿಮಗಾದರೂ ಅನಿಸದೇ?

ಮಸ್ಕಿ ಕ್ಷೇತ್ರವಿರಲಿ, ಬೇರಾವ ಕ್ಷೇತ್ರವೇ ಆಗಿರಲಿ ಅಭಿವೃದ್ಧಿಗೆ ಸರ್ಕಾರದಲ್ಲಿ ಹಣವೆಲ್ಲಿದೆ ಮುಖ್ಯಮಂತ್ರಿಗಳೇ? ರಾಜ್ಯದ ತೆರಿಗೆ ಹಣ, ಜನರ ಬೆವರಿನ ಋಣ ನಿಮ್ಮ ಸರ್ಕಾರದಲ್ಲಿರುವ ‘ಏಕಗವಾಕ್ಷಿ’ಗೆ ಆಪೆÇೀಷನವಾಗುತ್ತಿಲ್ಲವೇ? ಚುನಾವಣಾ ಕಾಲದಲ್ಲಿ ಮುಖ್ಯಮಂತ್ರಿ ಮತ್ತು ಅವರ ಸರ್ಕಾರದ ‘ಏಕಗವಾಕ್ಷಿ’ ಆಡುವ ಮಾತುಗಳಿಗೆ ಜನ ಮನ್ನಣೆ ನೀಡಬಾರದು ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd