ಇದು ಕೊಲೆಗಡುಕ ಸರ್ಕಾರ : ಹೆಚ್ ಡಿಕೆ ಆಕ್ರೋಶ

1 min read
KS Eshwarappa

ಇದು ಕೊಲೆಗಡುಕ ಸರ್ಕಾರ : ಹೆಚ್ ಡಿಕೆ ಆಕ್ರೋಶ H D Kumaraswamy saaksha tv

ಬೆಂಗಳೂರು : ನೆಲಮಂಗಲ ಸಾರಿಗೆ ನೌಕರನ ಪತ್ನಿ, ಮಕ್ಕಳ ಆತ್ಮಹತ್ಯೆ ಪ್ರರಕಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದು ಕೊಲೆಗಡುಕ ಸರ್ಕಾರ ಎಂದು ಟೀಕೆ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು.

H D Kumaraswamy saaksha tv

ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ.

ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನಹರಿಸಿ ಕೊರೊನಾ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ಸಿಎಂ ಬೊಮ್ಮಾಯಿ ಅವರನ್ನು ಒತ್ತಾಯಿಸುವುದಾಗಿ ಟ್ವಟ್ಟರ್ ನಲ್ಲಿ ಹೆಚ್ ಡಿ ಕೆ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd