H.D.Kumaraswamy | ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ
ಬೆಂಗಳೂರು : ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೇಸರ ಹೊರಹಾಕಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯನ್ನು ಕುಮಾರಸ್ವಾಮಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರಕಾರ ಮೈಮರೆತಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ? ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ.
ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ!3/8
— H D Kumaraswamy (@hd_kumaraswamy) July 27, 2022
ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ!
ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.