ಕನಿಷ್ಠ ಕಾಳಜಿ ಇಲ್ಲದ ಸಚಿವರನ್ನು ಸಂಪುಟದಿಂದ ಕಿತ್ತೊಗೆಯಬೇಕು : ಹೆಚ್ ಡಿಕೆ

1 min read
H D Kumaraswamy

ಕನಿಷ್ಠ ಕಾಳಜಿ ಇಲ್ಲದ ಸಚಿವರನ್ನು ಸಂಪುಟದಿಂದ ಕಿತ್ತೊಗೆಯಬೇಕು : ಹೆಚ್ ಡಿಕೆ H D Kumaraswamy

ಬೆಂಗಳೂರು : ಜನರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಸಚಿವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಆರೋಗ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ವಿಚಾರವಾಗಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕೋವಿಡ್ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ.

H D Kumaraswamy

ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ ಎಂದಿದ್ದಾರೆ.

ಅಲ್ಲದೆ ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಆಗ್ರಹಿಸಿದ್ದಾರೆ.

corona cases

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd