“ಪಾಪ.. ಕಾಂಗ್ರೆಸ್!! ಸುಳ್ಳುರಾಮಯ್ಯನ ಸುಳ್ಳುಗಳ ಸುಪ್ಪತ್ತಿಗೆಯ ಮೇಲೆ ಮೈಮರೆತು ತೇಲುತ್ತಿದೆ”
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಸಮರ ಸಾರಿದ್ದು, ಪಾಪ.. ಕಾಂಗ್ರೆಸ್!! ಸುಳ್ಳುರಾಮಯ್ಯನ ಸುಳ್ಳುಗಳ ಸುಪ್ಪತ್ತಿಗೆಯ ಮೇಲೆ ಮೈಮರೆತು ತೇಲುತ್ತಿದೆ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಕುಮಾರಸ್ವಾಮಿ, ʼಆಪರೇಷನ್ ಕಮಲ ಹಣದ ಕಥಾಪ್ರಸಂಗʼ ರೋಚಕ ʼಸಿದ್ದಸಿನಿಮಾʼ ಎಂಬ ಬಗ್ಗೆ ಅನುಮಾನ ಇಲ್ಲ. ಅದಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ, ಹಿಮ್ಮೇಳ-ಮುಮ್ಮೇಳ ಎಲ್ಲವೂ ನಿಮ್ಮದೆ? ಧೈರ್ಯವಿ ದ್ದರೆ ಅದರ ಬಗ್ಗೆ ಮಾತನಾಡಿ. ಕನ್ನಡಿಗರೆಲ್ಲರಿಗೂ ನಿಮ್ಮ ಕಪಟತನದ ಪರಿಚಯವಾಗಲಿ.
ಪಾಪ.. ಕಾಂಗ್ರೆಸ್!!
ಸುಳ್ಳುರಾಮಯ್ಯನ ಸುಳ್ಳುಗಳ ಸುಪ್ಪತ್ತಿಗೆಯ ಮೇಲೆ ಮೈಮರೆತು ತೇಲುತ್ತಿದೆ. ಮುಳುಗುವೆ ಎನ್ನುವ ಅರಿವೂ ಆ ಪಕ್ಷಕ್ಕಿಲ್ಲ. ಮುಳುಗುವ ಹಡಗಿನ ಕ್ಯಾಪ್ಟನ್ʼಗೆ ಬಿಜೆಪಿ ಬಾಲಂಗೋಚಿ ʼಸಿದ್ದಹಸ್ತನʼ ಅಡ್ಜೆಸ್ಟ್ʼಮೆಂಟ್ ರಾಜಕಾರಣ & ಹಣಕ್ಕೆ ಮಾರಿಕೊಂಡ ಆ ಸುಪಾರಿ ಆಟಗಾರ ತನ್ನ ಕೈಕಚ್ಚುತ್ತಿದ್ದಾನೆ ಎಂಬ ಅರಿವೇ ಇಲ್ಲ. 8/14— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 18, 2022
ಆಪರೇಷನ್ ಕಮಲದ ಬಾಬ್ತಿನ ಹಣ ಸ್ವೀಕರಿಸಿ ನಿಮಗೆ ತಂದುಕೊಟ್ಟ ನಿಮ್ಮ ಆ ಹಳೆಯ ಸ್ನೇಹಿತರೇ ಸ್ವತಃ ನನ್ನ ಬಳಿ ಬಿಚ್ಚಟ್ಟ ಕಟುಸತ್ಯವಿದು! ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಅಬ್ಬಬ್ಬಾ.. ನಿಮಗೆ ನೀವೇ ಸಾಟಿ!!
ಪಾಪ.. ಕಾಂಗ್ರೆಸ್!! ಸುಳ್ಳುರಾಮಯ್ಯನ ಸುಳ್ಳುಗಳ ಸುಪ್ಪತ್ತಿಗೆಯ ಮೇಲೆ ಮೈಮರೆತು ತೇಲುತ್ತಿದೆ. ಮುಳುಗುವೆ ಎನ್ನುವ ಅರಿವೂ ಆ ಪಕ್ಷಕ್ಕಿಲ್ಲ. ಮುಳುಗುವ ಹಡಗಿನ ಕ್ಯಾಪ್ಟನ್ʼಗೆ ಬಿಜೆಪಿ ಬಾಲಂಗೋಚಿ ʼಸಿದ್ದಹಸ್ತನʼ ಅಡ್ಜೆಸ್ಟ್ʼಮೆಂಟ್ ರಾಜಕಾರಣ & ಹಣಕ್ಕೆ ಮಾರಿಕೊಂಡ ಆ ಸುಪಾರಿ ಆಟಗಾರ ತನ್ನ ಕೈಕಚ್ಚುತ್ತಿದ್ದಾನೆ ಎಂಬ ಅರಿವೇ ಇಲ್ಲ.
ʼಆಪರೇಷನ್ ಕಮಲ ಹಣದ ಕಥಾಪ್ರಸಂಗʼ ರೋಚಕ ʼಸಿದ್ದಸಿನಿಮಾʼ ಎಂಬ ಬಗ್ಗೆ ಅನುಮಾನ ಇಲ್ಲ. ಅದಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ, ಹಿಮ್ಮೇಳ-ಮುಮ್ಮೇಳ ಎಲ್ಲವೂ ನಿಮ್ಮದೆ?
ಧೈರ್ಯವಿ ದ್ದರೆ ಅದರ ಬಗ್ಗೆ ಮಾತನಾಡಿ. ಕನ್ನಡಿಗರೆಲ್ಲರಿಗೂ ನಿಮ್ಮ ಕಪಟತನದ ಪರಿಚಯವಾಗಲಿ. 6/14— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 18, 2022
ಈ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕು” ಎಂದಿದ್ದು ಯಾರಪ್ಪಾ? ಇದು ಮಾತೃಪಕ್ಷದ ಟರ್ಮಿನೇಟರಯ್ಯನ ʼಮನ್ ಕೀ ಬಾತ್ʼ!! ಹೃದಯದಲ್ಲೇ ಹೆಪ್ಪುಗಟ್ಟಿದ್ದ ಕಾರ್ಕೋಟಕ ವಿಷವನ್ನೇ ಸ್ವಪಕ್ಷದ ಮೇಲೆ ಕಾರಿಕೊಂಡ ನೀವು ಈಗ ಯಾವ ಟೀಮು? ಬಿಜೆಪಿ ಬೀ ಟೀಮು ತಾನೇ?
ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ದಹಸ್ತನೇ, ನೀವೇ ʼಪರ್ಸಂಟೇಜ್ ವ್ಯವಹಾರದ ಪಿತಾಮಹʼ. ಆಪ್ತಶಾಸಕರಿಗೆ ಮೀಟಿಂಗ್ʼಗೆ ಇಂತಿಷ್ಟು ಎಂದು ಕೊಟ್ಟು ಕಮೀಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ʼಮಾಸ್ಟರ್ ಆಗಿ ಅಡ್ಡಡ್ಡ ನುಂಗಿ ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾದ ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ.









