ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಜ್ವರ ಹಾಗೂ ಕೆಮ್ಮಿನ ಸಮಸ್ಯೆ ಉಂಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯಕೀಯ ಮೂಲಗಳ ಪ್ರಕಾರ, ವೈದ್ಯರು ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮಾನಿಟರ ಮಾಡುತ್ತಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ವೈದ್ಯರು ಅವರಿಗೆ ಸಾಕಷ್ಟು ವಿಶ್ರಾಂತಿ ಅಗತ್ಯವಿದೆ ಎಂಬ ಸಲಹೆ ನೀಡಿದ್ದಾರೆ.
ಈ ಹಿಂದೆ ಕೆಲ ಸಮಯದ ಹಿಂದೆಯೂ ಕುಮಾರಸ್ವಾಮಿ ಆರೋಗ್ಯದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳ ವಿಶ್ರಾಂತಿಯ ಬಳಿಕ ಅವರು ರಾಜಕೀಯ ಚಟುವಟಿಕೆಗಳಿಗೆ ಮರಳಿದ್ದರು.
ಕುಮಾರಸ್ವಾಮಿ ಅವರ ಆಸ್ಪತ್ರೆಗೆ ದಾಖಲಾದ ಸುದ್ದಿಯ ಬಳಿಕ ಅವರ ಕುಟುಂಬದವರು ಹಾಗೂ ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರು ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಅವರ ಶೀಘ್ರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.