ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ (Prajwal Revanna Case), ಕೆ.ಆರ್.ನಗರದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ರದ್ದು ಕೋರಿ ರೇವಣ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಎರಡೂ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಪ್ರಕರಣಗಳಲ್ಲಿ ಹುರುಳಿಲ್ಲ, ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಹೊಳೆನರಸೀಪುರದಲ್ಲಿ ದಾಖಲಾಗಿರುವ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್ಡಿ ರೇವಣ್ಣ ಎ1 ಆರೋಪಿಯಾಗಿದ್ದರೆ. ಪುತ್ರ ಪ್ರಜ್ವಲ್ ರೇವಣ್ಣ ಎರಡನೇ ಆರೋಪಿಯಾಗಿದ್ದಾರೆ.