ಸಿದ್ದರಾಮಯ್ಯಗೆ ನಾಲ್ಕು ಪ್ರಶ್ನೆಗಳನ್ನ ಕೇಳಿದ ಹೆಚ್ ಡಿಕೆ
ಬೆಂಗಳೂರು : ಟ್ವಿಟ್ಟರ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಸಮರ ಮುಂದುವರೆಸಿದ್ದು, ನಾಲ್ಕು ಪ್ರಶ್ನೆಗಳನ್ನು ಕೇಳಿದ್ದಾರೆ.
ಕುಮಾರಸ್ವಾಮಿ ತಮ್ಮ ಟ್ವೀಟ್ ನಲ್ಲಿ… ಸ್ವಯಂ ಘೋಷಿತ ಸಂವಿಧಾನ ತಜ್ಞ, ಸ್ವಯಂ ಘೋಷಿತ ಸತ್ಯ ಹರಿಶ್ಚಂದ್ರ, ಈಗ ಹೇಳಿ? ಕಾಂಗ್ರೆಸ್ ಕಚೇರಿಯಲ್ಲೇ ಕಾರ್ಯಕರ್ತರ ಸಾಕ್ಷಿಯಾಗಿ “ಕಾಂಗ್ರೆಸ್ ಪಕ್ಷವನ್ನು ದೇಶದಿಂದಲೇ ಕಿತ್ತೊಗೆಯಬೇಕು” ಎಂದು ನೀವು ಮಾಡಿದ ಭೀಷಣ ಭಾಷಣ ಯಾರಿಗಯ್ಯಾ ಭೂಷಣ? ಮಾತೃಪಕ್ಷವನ್ನೇ ಮುಗಿಸಲು ಹೊರಟಿರುವ ನೀವು ಯಾವ ಟೀಮು?
ಸುಳ್ಳುರಾಮಯ್ಯ, ಈ ರಾಜ್ಯ ಕಂಡ ಅಪ್ರತಿಮ ಸುಳ್ಳುಗಾರ ನೀವು. ಆಶ್ರಯ ಕೊಟ್ಟ ಪಕ್ಷಕ್ಕೇ ಹಳ್ಳ ತೋಡುತ್ತಿರುವ ನೀವು ʼಬಿಜೆಪಿ ಬಾಲಂಗೋಚಿʼ & ʼಬಿಜೆಪಿಯ ಬೇನಾಮಿ ಆಸಾಮಿʼ ಎನ್ನುವುದು ಎಲ್ಲರಿಗೂ ಗೊತ್ತು!
ಕೊನೆಗೆ 4 ಪ್ರಶ್ನೆ!
1.ಆಪರೇಷನ್ ಕಮಲಕ್ಕೆ ಸಹಕರಿಸಿದ್ದಕ್ಕೆ ಸಿಕ್ಕ ಪ್ರತಿಫಲವೆಷ್ಟು?
2.ಆ ಪಾಪದ ಹಣವನ್ನು ಏನು ಮಾಡಿದಿರಿ?
3.ಹ್ಯೂಬ್ಲೆಟ್ ವಾಚಿನ ʼಸಿದ್ದರಹಸ್ಯʼವೇನು?
4.ಅರ್ಕಾವತಿ ರೀಡೂ ಬಗ್ಗೆ ಮೌನವೇಕೆ?
ಧೈರ್ಯವಿದ್ದರೆ ಉತ್ತರಿಸಿ, ವಿಷಯಾಂತರ ಬೇಡ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. H DK asked Siddaramaiah four questions







