ಬೆಂಗಳೂರು : ಹೆಮ್ಮಾರಿ ಕೊರೊನಾ ಸೋಂಕಿಗೆ ತುತ್ತಾಗಿರುವ ಕೆರೆ ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆ ಕಾಮೇಗೌಡರ ತುರ್ತು ಚಿಕಿತ್ಸೆಗೆ ರಾಜ್ಯ ಸರ್ಕಾರ ಸೂಕ್ತ ವ್ಯವಸ್ಥೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು. “ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ”.

“ಮನ್ ಕಿ ಬಾತ್ ನಲ್ಲಿ ಕೂಡ ಪ್ರಧಾನಿಯವರು ಕೊಂಡಾಡಿದ್ದಾರೆ. ಮುಖ್ಯಮಂತ್ರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೊಗಳಿ ಶೂಲಕ್ಕೆ ಏರಿಸಿದರೆ ಸಾಲದು. ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕಿದೆ” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.








