ನೂರಕ್ಕೆ ನೂರರಷ್ಟು ನಾನು ಗೆಲ್ಲುವ ವಿಶ್ವಾಸದಲ್ಲಿದ್ದೇನೆ: ಹೆಚ್.ಕುಸುಮಾ ( H. Kusuma )
ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಹೆಚ್ ಕುಸುಮಾ ( H. Kusuma ) ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಕುಸುಮಾ ಅವರು ಇಂದು ಮತದಾನಕ್ಕೂ ಮೊದಲು ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಕಾಲಭೈರವ ಹಾಗೂ ಗಂಗಾಧರೇಶ್ವರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಬಳಿಕ ಜ್ಞಾನಭಾರತಿ ವಾರ್ಡ್ ನ ಮತಗಟ್ಟೆ 304ರಲ್ಲಿ ಮತಚಾಲಾಯಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಮತ ನನ್ನ ಹಕ್ಕು. ನೊಂದವರ ಪರವಾಗಿ ಕೆಲಸ ಮಾಡುವ ಹೆಣ್ಣು ಮಗಳಿಗೆ ಮತ ಹಾಕಿದ್ದೇನೆ. ಚುನಾವಣೆ ಆಯೋಗ ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ.
ಹೀಗಾಗಿ, ಜನರು ನಿರಾತಂಕವಾಗಿ ಮತದಾನ ಮಾಡಬೇಕು. ಯುವಕರು ಬಂದು ಮತ ಚಲಾಯಿಸಬೇಕು. ಮತ ಚಲಾವಣೆ ಯುವಕರ ಹಕ್ಕು. ಎಲ್ಲರೂ ಬಂದು ಯುವ ಜನತೆ ಪ್ರತಿನಿಧಿಯಾದ ನನಗೆ ಮತ ಚಲಾವಣೆ ಮಾಡಿ’ ಎಂದೂ ಮನವಿ ಮಾಡಿದರು.
ಇನ್ನು ನೊಂದವರ ಪರ, ಅಭಿವೃದ್ಧಿ ಪರ ಕೆಲಸ ಮಾಡುವವರಿಗೆ ಜನ ಮತ ಹಾಕುತ್ತಾರೆ ಎಂಬ ವಿಶ್ವಾಸ ಇದೆ. ನೂರಕ್ಕೆ ನೂರರಷ್ಟು ನಾನು ಗೆಲ್ಲುವ ವಿಶ್ವಾಸದಲ್ಲಿ ಇದ್ದೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮುಂಜಾನೆ ಏಳು ಗಂಟೆಯಿಂದ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪಚುನಾವಣೆ ಮತದಾನ ಆರಂಭವಾಗಿದೆ. ಆರ್.ಆರ್. ನಗರ ಕ್ಷೇತ್ರ ಬೆಂಗಳೂರು ವ್ಯಾಪ್ತಿಯಲ್ಲಿ ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮತಗಟ್ಟೆಗಳತ್ತ ಮತದಾರರು ಮಂದಗತಿಯಲ್ಲಿ ಬರುತ್ತಿದ್ದಾರೆ. ಕ್ಷೇತ್ರದಲ್ಲಿ ಮೊದಲ ಒಂದು ಗಂಟೆ ಅವಧಿಯಲ್ಲಿ ಶೇ 6ರಷ್ಟು ಮತದಾನವಾಗಿದೆ ಎಂದು ವರದಿ ತಿಳಿಸಿದೆ.
ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ನಡುವೆ ಸ್ಪರ್ಧೆ ಇದೆ.
ಮಂಗಳೂರು ಏರ್‌ಪೋರ್ಟ್ ಇನ್ನು ಅದಾನಿ ಮಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel