ಎಚ್. ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ FIR ದಾಖಲಾಗಿರುವ ಪ್ರಕರಣ ಇದೀಗ ಹೊಸ ರಾಜಕೀಯ ತಿರುವು ಪಡೆದುಕೊಂಡಿದೆ.
ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿದ ವಿಶ್ವನಾಥ್, FIR ಹಿಂದೆ ಯತೀಂದ್ರ ಸಿದ್ದರಾಮಯ್ಯ ಅವರ ಕುಮ್ಮಕ್ಕು ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರ ನೋಟಿಸ್‌ಗೆ ನಾನು ಈಗಾಗಲೇ ಉತ್ತರ ಕೊಟ್ಟಿದ್ದೇನೆ. ಆದರೂ ಕೂಡ FIR ದಾಖಲಿಸಿ ನನ್ನ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ವಿಶ್ವನಾಥ್ ಹೇಳಿದ್ದಾರೆ.ಈ ಎಲ್ಲ ಬೆಳವಣಿಗೆಯ ಹಿಂದೆ ಯತೀಂದ್ರ ಸಿದ್ದರಾಮಯ್ಯ ಅವರ ಪ್ರಭಾವ ಮತ್ತು ಕುಮ್ಮಕ್ಕು ಇದೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.
ಈ ಆರೋಪ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ವಾಗ್ವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.







